ಮಂಗಳೂರು: ಪೂಂಜಾಲಕಟ್ಟೆ – ಚಾರ್ಮಾಡಿ ಹೆದ್ದಾರಿಯನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕಾಮಗಾರಿ ನಡೆಯಲಿದ್ದು, 718 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಈ ರಸ್ತೆಯನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಹಲವಾರು ವರ್ಷಗಳಿಂದ ಬೆಂಚ್ ಮಾರ್ಕಿಂಗ್ ಸೆಂಟ್ರಲ್ ಮಾರ್ಕಿಂಗ್, ತೆರವುಗೊಳಿಸಲ್ಪಡುವ ಮರಗಳ ಸಮೀಕ್ಷೆ ಈಗಾಗಲೇ ನಡೆದಿದ್ದು, ಇದು ಅಪೂರ್ಣವಾಗಿದೆ ಎಂದು ತಿಳಿದು ಬಂದಿದೆ.
ಈ ನಿಟ್ಟಿನಲ್ಲಿ ಸರ್ಕಾರದ ಆದೇಶದನ್ವಯ ತಿರುವುಗಳ ಮರು ಸಮೀಕ್ಷೆ ನಡೆಸಬೇಕಾಗಿದೆ ಎಂದು ದ.ಕ. ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ವೈ.ಕೆ. ದಿನೇಶ್ ಕುಮಾರ್ ತಿಳಿಸಿದ್ದಾರೆ.
ರಸ್ತೆ ಅಭಿವೃದ್ಧಿ ಮಾಡುವ ಸಂದರ್ಭದಲ್ಲಿ ತೆರವುಗೊಳಿಸಬೇಕಾದ ಮರಗಳ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯ ಆಫೀಸ್ ನಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಈ ಸಂದರ್ಭದಲ್ಲಿ ಮಂಗಳೂರು ರೇಂಜರ್ ಎ.ಸಿ.ಎಫ್ ಸುಬ್ರಹ್ಮಣ್ಯ ರಾವ್, ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಮತ್ತು ಹೆದ್ದಾರಿ ಇಂಜಿನಿಯರ್ ಉಪಸ್ಥಿತರಿದ್ದರು.