ಪಾಪ್ಯುಲರ್ ಫ್ರಂಟ್ ಹಿರಿಯ ಸದಸ್ಯ ಬಿ.ಎಂ.ಸಯ್ಯದ್ ನಿಧನ

Prasthutha: January 22, 2022


ಜೋಕಟ್ಟೆ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಹಿರಿಯ ಕಾರ್ಯಕರ್ತ ಬಿ.ಎಂ. ಸಯ್ಯದ್ ಜೋಕಟ್ಟೆ ನಿಧನರಾಗಿದ್ದಾರೆ.
ಅವರಿಗೆ 62 ವರ್ಷ ವಯಸ್ಸಾಗಿತ್ತು.


ಇತ್ತೀಚೆಗೆ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚೇತರಿಸಿಕೊಂಡ ಬಳಿಕ ಕಳೆದ ವಾರವಷ್ಟೇ ಅವರು ಮನೆಗೆ ಮರಳಿದ್ದರು. ನಿನ್ನೆ ಶುಕ್ರವಾರದ ನಮಾಝ್ ಗೆ ಮಸೀದಿಗೆ ತೆರಳಿ ನಮಾಝ್ ನಿರ್ವಹಿಸಿದ್ದರು. ಆದರೆ ಶನಿವಾರ ಬೆಳಗ್ಗೆ ಮನೆಯಲ್ಲೇ ನಿಧನರಾಗಿದ್ದಾರೆ.


ಪಿಎಫ್ಐಯಲ್ಲಿ ಪ್ರಾರಂಭ ಕಾಲದಿಂದಲೇ ಸಕ್ರಿಯರಾಗಿ ತೊಡಗಿಸಿಕೊಂಡಿದ್ದ ಸಯ್ಯದ್ ಅವರು, ತನ್ನ ಹಿರಿ ವಯಸ್ಸಿನಲ್ಲೂ ಎಲ್ಲಾ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ನಿಲ್ಲುತ್ತಿದ್ದರು. ಸರಳ ಸಜ್ಜನಿಕೆಯ ಹಾಗೂ ಹೋರಾಟದ ಹುಮ್ಮಸ್ಸಿನ ಅವರ ವ್ಯಕ್ತಿತ್ವವು ಯುವ ಪೀಳಿಗೆಗೆ ಮಾದರಿಯಾಗಿತ್ತು. ಪಾಪ್ಯುಲರ್ ಫ್ರಂಟ್ ನ ಎಲ್ಲಾ ಕಾರ್ಯಕ್ರಮಗಳಲ್ಲೂ ಮುಂಚೂಣಿಯಲ್ಲಿ ಇರುತ್ತಿದ್ದ ಅವರು, ಸ್ಥಳೀಯವಾಗಿ ತಮ್ಮನ್ನು ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.


ಪತ್ನಿ, ಮಕ್ಕಳು, ಸಹೋದರರು ಸೇರಿದಂತೆ ಅಪಾರ ಬಂಧುಬಳಗವನ್ನು ಅವರು ಅಗಲಿದ್ದಾರೆ.
ಜೋಕಟ್ಟೆ ಮುಹಿಯ್ಯುದ್ದೀನ್ ಜುಮಾ ಮಸೀದಿಯ ಖಬರಸ್ತಾನದಲ್ಲಿ ಶನಿವಾರ ಮಧ್ಯಾಹ್ನ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!