ಹೊಸದಿಲ್ಲಿ: 2023ರ ವೇಳೆಗೆ ಭಾರತವು ಚೀನಾವನ್ನು ಹಿಂದಿಕ್ಕಿ ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಹೊರಹೊಮ್ಮಲಿದೆ ಎಂದು ವಿಶ್ವಸಂಸ್ಥೆ ಬಿಡುಗಡೆ ಮಾಡಿದ ವರದಿ ತಿಳಿಸಿದೆ.
ವಿಶ್ವ ಜನಸಂಖ್ಯಾ ದಿನದ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ವ್ಯವಹಾರಗಳ ವಿಭಾಗದ ಜನಸಂಖ್ಯಾ ವಿಭಾಗದಿಂದ ವರ್ಲ್ಡ್ ಪಾಪ್ಯುಲೇಶನ್ ಪ್ರಾಸ್ಪೆಕ್ಟ್ಸ್ ಪ್ರಕಟಿಸಿದ ವರದಿಯ ಪ್ರಕಾರ 2022 ರ ನವೆಂಬರ್ ಮಧ್ಯದ ವೇಳೆಗೆ ವಿಶ್ವದ ಜನಸಂಖ್ಯೆಯು ಎಂಟು ಬಿಲಿಯನ್ ತಲುಪುವ ಮುನ್ಸೂಚನೆ ಇದೆ ಎಂದು ಎಂದು ಅಂದಾಜಿಸಲಾಗಿದೆ.
ವಿಶ್ವಸಂಸ್ಥೆಯ ಇತ್ತೀಚಿನ ಅಂದಾಜಿನ ಪ್ರಕಾರ ವಿಶ್ವದ ಜನಸಂಖ್ಯೆಯು 2030 ರಲ್ಲಿ ಸುಮಾರು 8.5 ಶತಕೋಟಿ ಮತ್ತು 2050 ರಲ್ಲಿ 9.7 ಶತಕೋಟಿಗೆ ಬೆಳೆಯಬಹುದು. . 2080ರ ವೇಳೆಗೆ ಜನಸಂಖ್ಯೆ 1,000 ಕೋಟಿ ದಾಟಲಿದೆ. 2100 ರವರೆಗೆ ಯಾವುದೇ ಪ್ರಮುಖ ಹೆಚ್ಚಳವನ್ನು ನಿರೀಕ್ಷಿಸಲಾಗುವುದಿಲ್ಲ ಎಂದು ಅಂದಾಜಿಸಲಾಗಿದೆ.
2022 ರಲ್ಲಿ ವಿಶ್ವದ ಎರಡು ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಪ್ರದೇಶಗಳಾದ ಪೂರ್ವ ಮತ್ತು ಆಗ್ನೇಯ ಏಷ್ಯಾದಲ್ಲಿ ಜಾಗತಿಕ ಜನಸಂಖ್ಯೆಯ 29 ಪ್ರತಿಶತ ಜನರಿದ್ದರೆ, ಮಧ್ಯ ಮತ್ತು ದಕ್ಷಿಣ ಏಷ್ಯಾದಲ್ಲಿ ಒಟ್ಟು ವಿಶ್ವದ ಜನಸಂಖ್ಯೆಯ 26 ಪ್ರತಿಶತ ಜನರಿದ್ದಾರೆ.