ಅಶ್ಲೀಲ ಸೀಡಿ ಪ್ರಕರಣ : ಎಸ್.ಐ.ಟಿ ರಚನೆ ಪ್ರಶ್ನಿಸಿ ಸಂತ್ರಸ್ತೆ ಸುಪ್ರೀಮ್ ಮೊರೆ; ಮತ್ತೆ ಇಕ್ಕಟ್ಟಿನಲ್ಲಿ ರಮೇಶ್ ಜಾರಕಿಹೊಳಿ

Prasthutha|

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ರಚನೆಯನ್ನು ಪ್ರಶ್ನಿಸಿ ಸಂತ್ರಸ್ತ ಯುವತಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾಳೆ .ಇದರಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ ಎದುರಾಗಲಿದೆ.

- Advertisement -

ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ದಾಖಲಿಸಿದ್ದ ಪ್ರಕರಣದಲ್ಲಿ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ಹಸಿರು ನಿಶಾನೆ ತೋರಿತ್ತು. ಈ ಮಧ್ಯೆ ರಮೇಶ್ ಜಾರಕಿಹೊಳಿ ಮೇಲಿನ ಅತ್ಯಾಚಾರ, ಕೆಲಸದ ಅಮಿಷೆ ತೋರಿಸಿ ಲೈಂಗಿಕ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಇತ್ತೀಚೆಗೆ ಬಿ ವರದಿಯನ್ನು ಸಲ್ಲಿಸಿತ್ತು.

ಈ ಪ್ರಕರಣದಲ್ಲಿ ತನಿಖೆ ನಡೆಸಿದ ಎಸ್ಐಟಿ ರಚನೆ ಕಾನೂನು ಬಾಹಿರ. ಎಸ್ ಐಟಿ ರಚನೆ ಸರಿಯಿಲ್ಲ. ಸರ್ಕಾರ ಸ್ವಯಂ ಪ್ರೇರಿತವಾಗಿ ಎಸ್ಐಟಿ ರಚನೆ ಮಾಡಿದೆ ಎಂದು ಸಂತ್ರಸ್ತ ಯುವತಿ ಪರ ವಕೀಲರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

- Advertisement -

ಎಸ್ ಐಟಿ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ಕಾರಣ ಇದೀಗ ಮತ್ತೆ ರಮೇಶ್ ಜಾರಕಿಹೊಳಿ ಇಕ್ಕಟ್ಟಿನಲ್ಲಿ ಸಿಲುಕಿದಂತಾಗಿದೆ. ಒಂದಡೆಗೆ ಸುಪ್ರೀಂನಲ್ಲಿ ಸಲ್ಲಿಸಿರುವ ಅರ್ಜಿ ಇತ್ಯರ್ಥವಾಗಬೇಕು. ಒಂದು ವೇಳೆ ಎಸ್ಐಟಿ ರಚನೆ ಸರಿಯಿಲ್ಲ ಎಂದು ಅರ್ಜಿದಾರರ ಮನವಿಯನ್ನು ಪುರಸ್ಕರಿಸಿದರೆ ಮತ್ತೆ ಸಿಡಿ ಪ್ರಕರಣ ವಿವಾದಕ್ಕೆ ನಾಂದಿ ಹಾಡಲಿದೆ. ಒಂದು ವೇಳೆ ಹೈಕೋರ್ಟ್ ತೀರ್ಪನ್ನೇ ಸುಪ್ರೀಂಕೋರ್ಟ್ ಎತ್ತಿ ಹಿಡಿದರೆ, ಜಾರಕಿಹೊಳಿ ಸಚಿವರಾಗುವ ಹಾದಿ ಸುಗಮವಾಗಲಿದೆ ಎಂದು ಹೇಳಲಾಗಿದೆ.



Join Whatsapp