ಪೋಶೆ ಕಾರು ಅಪಘಾತ ಪ್ರಕರಣ: ಬಾಲಕನ ಅಜ್ಜನನ್ನು ಬಂಧಿಸಿದ ಪುಣೆ ಪೊಲೀಸರು

Prasthutha|

ಪುಣೆ: ಪೋಶೆ ಕಾರು ಅಪಘಾತ ಪ್ರಕರಣದಲ್ಲಿ 17 ವರ್ಷದ ಬಾಲಕ ಕಾರು ಚಾಲನೆ ಮಾಡುತ್ತಿರಲಿಲ್ಲವೆಂದು ಬಿಂಬಿಸಲು ಪ್ರಯತ್ನಿಸಿದ್ದಕ್ಕೆ ಬಾಲಕನ ಅಜ್ಜನನ್ನು ಬಂಧಿಸಲಾಗಿದೆ ಎಂದು ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಶನಿವಾರ ಹೇಳಿದ್ದಾರೆ.

- Advertisement -

ಬಾಲಕನ ಅಜ್ಜನ ವಿರುದ್ಧ ಐಪಿಸಿ ಸೆಕ್ಷನ್ 365 ಮತ್ತು 368 ಅಡಿಯಲ್ಲಿ ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಮಿತೇಶ್ ಮಾಹಿತಿ ನೀಡಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ವರದಿ ಮಾಡಿದೆ. ‘ಕಾರನ್ನು ಯಾರೂ ಚಾಲನೆ ಮಾಡುತ್ತಿದ್ದರು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ. ಈ ಸಂಬಂಧ ಬಾಲಕನ ಕುಟುಂಬದ ವಯಸ್ಕ ಚಾಲಕನ ಹೇಳಿಕೆಯನ್ನು ದಾಖಲಿಸಿಕೊಂಡಿದ್ದೇವೆ. ಆತನ ಹೇಳಿಕೆ ಮಹತ್ವದ್ದಾಗಿದೆ’ ಎಂದು ಅವರು ಹೇಳಿದ್ದಾರೆ.

Join Whatsapp
Exit mobile version