ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿ ಕೆಂಪೇಗೌಡರಿಗೆ ಅಗೌರವ ತೋರಿರುವ ಆರೋಪ ನಟ ಚೇತನ್ ಅಹಿಂಸಾ ಮೇಲೆ ಬಂದಿದೆ. ಕೆಂಪೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆಂದು ಆರೋಪಿಸಿ ನಟ ಚೇತನ್ ಅಹಿಂಸಾ ವಿರುದ್ಧ ವಕೀಲ ಆರ್ಎಲ್ಎನ್ ಮೂರ್ತಿ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಪಡೆದ ಪೊಲೀಸರು ಎನ್ ಸಿಆರ್ ದಾಖಲಿಸಿದ್ದಾರೆ.
ತಮ್ಮ ಪೇಸ್ ಬುಕ್ ಪೇಜ್ ನಲ್ಲಿ ಚೇತನ್, ಇಬ್ಬರು ಯೋಧರ ಕಥೆ ಎಂದು ಕೆಂಪೇಗೌಡ ಹಾಗೂ ಟಿಪ್ಪು ಸುಲ್ತಾನ್ ಬಗ್ಗೆ ಬರೆದುಕೊಂಡಿದ್ದಾರೆ. ಕೆಂಪೇಗೌಡ- ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ. ಟಿಪ್ಪು ಸುಲ್ತಾನ್ ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ. ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ. ದುರದೃಷ್ಟವಶಾತ್, ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂದ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ ಎಂದು ಚೇತನ್ ಅಹಿಂಸಾ ಬರೆದುಕೊಂಡಿದ್ದಾರೆ.