ಯು.ಟಿ ಖಾದರ್ ವಿರುದ್ಧ ಅವಹೇಳನಕಾರಿ ಪೋಸ್ಟ್| ಶ್ರೀರಾಮಸೇನೆ ಮುಖಂಡನ ವಿರುದ್ಧ ದೂರು

Prasthutha|

ಚಿಕ್ಕಮಗಳೂರು: ನೂತನ ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಶ್ರೀರಾಮಸೇನೆಯ ಮುಖಂಡನ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿದೆ.

- Advertisement -

ಶ್ರೀರಾಮಸೇನೆಯ ಮುಖಂಡ ಪ್ರೀತೇಶ್ ಎಂಬವರು ಯು.ಟಿ ಖಾದರ್ ಬಗ್ಗೆ ಅವಹೇಳನಕಾರಿಯಾಗಿ ವ್ಯಂಗ್ಯ ಮಾಡಿದ್ದಾರೆ. ಅಲ್ಲದೆ ಕೋಮು ದ್ವೇಷ ಹಾಗೂ ಜನಾಂಗದ ನೋವಿಗೆ ಪ್ರೀತೇಶ್ ಕಾರಣರಾಗಿದ್ದಾರೆ. ಈ ರೀತಿ ಸಂವಿಧಾನಾತ್ಮಕ ಹುದ್ದೆಗೆ ಅಗೌರವ ತೋರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಕ್ಷದ ಐಟಿ ಸೆಲ್‍ನ ಜಿಲ್ಲಾ ಕಾರ್ಯದರ್ಶಿ ಎಂಎಲ್‍ಎ ಮಂಜು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪೋಸ್ಟ್‌ನಲ್ಲಿ ಏನಿತ್ತು?

- Advertisement -

`ಸದನದಲ್ಲಿ ಮಾನ್ಯ ಸಭಾಧ್ಯಕ್ಷರೇ ಅನ್ನಬೇಕಾ? ಸಾಬಾಧ್ಯಕ್ಷರೇ ಅನ್ನಬೇಕಾ?’ ಎಂದು ಶ್ರೀರಾಮ ಸೇನೆ ಮುಖಂಡ ಬರೆದುಕೊಂಡಿದ್ದರು. ಅಲ್ಲದೆ ಯುಟಿ ಖಾದರ್ ಅವರ ಹೆಸರಿನಲ್ಲಿ ಟ್ಯಾಗ್ ಬಳಸಿ ಪೋಸ್ಟ್ ಮಾಡಲಾಗಿತ್ತು.

ಈ ಸಂಬಂಧ ಚಿಕ್ಕಮಗಳೂರು ನಗರದ ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.



Join Whatsapp