ಉಡುಪಿ: ರವಿವಾರ ನಡೆದ ಹತ್ಯೆ ಪ್ರಕರಣದ ನಾಲ್ಕು ಮೃತದೇಹಗಳ ಮರಣೋತ್ತರ ಪರೀಕ್ಷೆ ಮಣಿಪಾಲ ಕೆಎಂಸಿಯಲ್ಲಿ ನಡೆದಿದೆ. ಮರಣೋತ್ತರ ಪರೀಕ್ಷೆಯ ಬಳಿಕ ನಾಲ್ವರ ಪ್ರಾರ್ಥಿವ ಶರೀರವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು.
ಮೃತ ಹಸೀನಾ ಪುತ್ರ, ಹತ್ಯೆಗೀಡಾದ ಮೂವರು ಮಕ್ಕಳ ಸೋದರ ಅಸಾದ್ ಬೆಂಗಳೂರಿನಿಂದ ಆಗಮಿಸಿದ್ದಾರೆ.
ಶವಗಾರಕ್ಕೆ ಬರುತ್ತಿದ್ದಂತೆ ಪುತ್ರನ ಕಣ್ಣೀರಾಗಿದ್ದಾನೆ. ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿರುವ ಪತಿ ನೂರ್ ಮಹಮದ್ ಉಡುಪಿಗೆ ಆಗಮಿಸಲಿದ್ದಾರೆ. ನಾಲ್ಕು ಪ್ರಾರ್ಥಿವ ಶರೀರಗಳನ್ನು ನೇಜಾರು ತೃಪ್ತಿ ಲೇಔಟ್ ನಲ್ಲಿರುವ ಮನೆಗೆ ಕೊಂಡೊಯ್ಯಲಾಯಿತು. ಮಧ್ಯಾಹ್ನ ಕೋಡಿಬೆಂಗ್ರೆ ಮಸೀದಿಯಲ್ಲಿ ಅಂತ್ಯಕ್ರಿಯೆಯನ್ನು ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.