ವಿಟ್ಲ | ವ್ಯಕ್ತಿಯ ಸಾವಿನಲ್ಲಿ ಅನುಮಾನ: ದಫನ ಮಾಡಿದ್ದ ಮೃತದೇಹ ಮೇಲೆತ್ತಿ ಮರಣೋತ್ತರ ಪರೀಕ್ಷೆ

Prasthutha|

ವಿಟ್ಲ : ಮೃತ ವ್ಯಕ್ತಿಯ ಸಾವಿನಲ್ಲಿ ಅನುಮಾನ ಇರುವುದಾಗಿ ಆರೋಪಿಸಿ ಮೃತರ ಸಹೋದರ ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ದಫನ ಮಾಡಿದ ಮೃತದೇಹವನ್ನು ಮೇಲಕ್ಕೆತ್ತಿ ಮರು ತನಿಖೆ ಮಾಡುವ ಕಾರ್ಯಕ್ಕೆ ಪೊಲೀಸರು ಮುಂದಾಗಿದ್ದಾರೆ.

- Advertisement -

ಕನ್ಯಾನ ಬಳಿಯ ಸುಂಕದಕಟ್ಟೆ ಮಜೀರ್ಪಳ್ಳ ನಿವಾಸಿ ಅಶ್ರಫ್ (44) ಮೇ 6 ರಂದು ಮೃತಪಟ್ಟಿದ್ದರು. ಅದೇ ದಿನ ಸಂಜೆ ಕನ್ಯಾನ ಬಂಡಿತ್ತಡ್ಕದ ರಹ್ಮಾನಿಯಾ ಜುಮ್ಮಾ ಮಸೀದಿಯಲ್ಲಿ ದಫನ ನಡೆಸಲಾಗಿತ್ತು. ಇವರ ಸಾವಿನಲ್ಲಿ ಅನುಮಾನವಿದೆ ಅದೊಂದು ಸಹಜ ಸಾವಲ್ಲ ಎಂದು ಆರೋಪಿಸಿ ಮೃತರ ಸಹೋದರ ಇಬ್ರಾಹಿಂ ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ್ದರು ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಂಡ ಮಂಜೇಶ್ವರ ಪೊಲೀಸರು, ಧಪನಗೊಂಡ ದೇಹವನ್ನು ಮೇಲಕ್ಕೆತ್ತಿ ಶವ ಪರೀಕ್ಷೆ ನಡೆಸಲು ನಿರ್ಧರಿಸಿದ್ದಾರೆ. ಈ ಹಿನ್ನಲೆಯಲ್ಲಿ ನ್ಯಾಯಾಲಯದ ಆದೇಶ ಪಡೆದು ಮಂಜೇಶ್ವರ ಪೊಲೀಸರು ರಹ್ಮಾನಿಯಾ ಜುಮ್ಮಾ ಮಸೀದಿಗೆ ಗುರುವಾರ ಬೆಳಿಗ್ಗೆ ಆಗಮಿಸಿದ್ದಾರೆ.

Join Whatsapp
Exit mobile version