ಯಾವುದೇ ಪರಿಸ್ಥಿತಿಯಲ್ಲೂ ರಾಹುಲ್, ಪ್ರಿಯಾಂಕಾ ಗಾಂಧಿ ಜೊತೆ ನಿಲ್ಲುತ್ತೇನೆ: ನವಜೋತ್ ಸಿಧು

Prasthutha|

ನವದೆಹಲಿ: ಇತ್ತೀಚೆಗೆ ಪಂಜಾಬ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನವಜ್ಯೋತ್ ಸಿಂಗ್ ಸಿಧು, ಹುದ್ದೆ ಇರಲಿ, ಇಲ್ಲದಿರಲಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಪರ ನಿಲ್ಲುತ್ತೇನೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

- Advertisement -

ಈ ವಾರ ಕಾಂಗ್ರೆಸ್ ಮುಖ್ಯಸ್ಥರ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಬಳಿಕ ಪಂಜಾಬ್ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಪಂಜಾಬ್ ಅಸೆಂಬ್ಲಿ ಚುನಾವಣೆಗೆ ಕೆಲವೆ ತಿಂಗಳು ಬಾಕಿ ಇರುವಾಗ ಸಿಧು ರಾಜೀನಾಮೆ ನೀಡಿದ್ದರಿಂದ ಪಕ್ಷ ಇಕ್ಕಟ್ಟಿಗೆ ಸಿಲುಕಿತ್ತು.

ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರೊಂದಿಗಿನ ಹಗೆತನದಲ್ಲಿ ಗಾಂಧಿ ಕುಟುಂಬದ ಬೆಂಬಲ ಪಡೆದ ಸಿಧು, ಗಾಂಧೀಜಿ ಮತ್ತು ಶಾಸ್ತ್ರೀಜಿ ಅವರ ತತ್ವಗಳನ್ನು ಎತ್ತಿಹಿಡಿಯುವುದಾಗಿ ಪ್ರತಿಜ್ಞೆ ಮಾಡಿದರು



Join Whatsapp