ಕರ್ನಾಟಕದ ಪ್ರಾಂಜಲ್‌ಗೆ ಮರಣೋತ್ತರ ಶೌರ್ಯ ಪ್ರಶಸ್ತಿ

Prasthutha|

ನವದೆಹಲಿ: ಜೀವದ ಹಂಗು ತೊರೆದು ದೇಶ ಸೇವೆ ಸಲ್ಲಿಸಿದ ಕರ್ನಾಟಕದ ಯೋಧ ಪ್ರಾಂಜಲ್‌ಗೆ ಶೌರ್ಯ ಪ್ರಶಸ್ತಿ ಪ್ರಕಟವಾಗಿದೆ. ಪ್ರಾಂಜಲ್ ಸೇರಿದಂತೆ 80 ಮಂದಿ ಯೋಧರಿಗೆ 75ನೇ ಗಣರಾಜ್ಯೋತ್ಸವದ ಅಂಗವಾಗಿ ಶೌರ್ಯ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

- Advertisement -

ರಾಷ್ಟ್ರೀಯ ರೈಫಲ್ಸ್‌ನ 63ನೇ ಬೆಟಾಲಿಯನ್‌ನಲ್ಲಿ ಯೋಧರಾಗಿದ್ದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಬೆಂಗಳೂರಿನವರಾಗಿದ್ದಾರೆ. ಕಳೆದ ವರ್ಷ ನ.22ರಂದು ಜಮ್ಮು ಕಾಶ್ಮೀರದ ರಜೌರಿಯಲ್ಲಿ ಉಗ್ರರ ಜೊತೆ ನಡೆದ ಗುಂಡಿನ ಕಾಳಗದಲ್ಲಿ ಹುತಾತ್ಮರಾಗಿದ್ದರು.

6 ಮಂದಿಗೆ ಕೀರ್ತಿ ಚಕ್ರ (3 ಮರಣೋತ್ತರ), 16 ಮಂದಿಗೆ ಶೌರ್ಯಚಕ್ರ (2 ಮರಣೋತ್ತರ), 53 ಮಂದಿಗೆ ಸೇನಾ ಪದಕ (7 ಮರಣೋತ್ತರ), ಒಬ್ಬರಿಗೆ ನೌಕಾಸೇನಾ ಪದಕ ಮತ್ತು 4 ಮಂದಿಗೆ ವಾಯುಸೇನಾ ಪದಕಗಳನ್ನು ಪ್ರಕಟಿಸಲಾಗಿದೆ.

- Advertisement -

31 ಪರಮ ವಿಶಿಷ್ಟ ಸೇವಾ ಪದಕ, 4 ಉತ್ತಮ ಸೇವಾ ಪದಕ, 2 ಬಾರ್ ಟು ಅತಿ ವಿಶಿಷ್ಟ ಸೇವಾ ಪದಕ, 59 ಅತಿ ವಿಶಿಷ್ಟ ಸೇವಾ ಪದಕ, 10 ಯುದ್ಧ ಸೇವಾ ಪದಕ, ಕರ್ತವ್ಯ ಶ್ರದ್ದೆ ವಿಭಾಗದಲ್ಲಿ 8 ಬಾರ್ ಟು ಸೇನಾ ಪದಕ, 38 ಸೇನಾ ಪದಕ, 10 ಯುದ್ಧ ಸೇವಾ ಪದಕ, 59 ಅತೀ ವಿಶಿಷ್ಟ ಪದಕ, ಕರ್ತವ್ಯ ಶ್ರದ್ಧೆ ವಿಭಾಗದಲ್ಲಿ 8 ಬಾರ್‌ ಟು ಸೇನಾ ಪದಕ, 38 ಸೇನಾ ಪದಕ, 10 ನೌಕಾ ಸೇನಾ ಪದಕ, 5 ಬಾರ್ 2 ಸೇವಾ ಪದಕ ಮತ್ತು 130 ವಿಶಿಷ್ಟ ಸೇವಾ ಪದಕಗಳನ್ನು ಪ್ರಕಟಿಸಲಾಗಿದೆ.

1132 ಮಂದಿಗೆ ಪೊಲೀಸ್ ಪದಕ ಪ್ರಕಟಿಸಲಾಗಿದೆ. ಇದರಲ್ಲಿ 277 ಶೌರ್ಯ ಪದಕಗಳು ಸೇರಿವೆ. 72 ಮಂದಿ ಕಾಶ್ಮೀರ , 65 ಸಿಆರ್‌ಪಿಎಫ್ ,18 ಮಹಾರಾಷ್ಟ್ರ ,21 ಎಸ್‌ಎಸ್‌ಬಿ ಪೊಲೀಸರು ಶೌರ್ಯ ಪದಕ ಪಡೆದುಕೊಂಡಿದ್ದಾರೆ.



Join Whatsapp