‘ರಾಜ್ಯದಲ್ಲಿ ಮೇ. 24 ರ ಬಳಿಕ ಲಾಕ್ ಡೌನ್ ವಿಸ್ತರಿಸಿ’ : ಕುಮಾರಸ್ವಾಮಿ ಒತ್ತಾಯ

Prasthutha|

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕಿನ ಅಬ್ಬರದಿಂದ ಅಪಾರ ಸಾವು ನೋವುಗಳು ಸಂಭವಿಸುತ್ತಿರುವುದರಿಂದ ಮೇ. 24 ರ ಬಳಿಕ ಲಾಕ್ ಡೌನ್ ವಿಸ್ತರಣೆ ಮಾಡುವುದು ಅನಿವಾರ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಿಸದಿದ್ದರೆ ದೊಡ್ಡ ಅನಾಹುತ ಆಗಲಿದೆ. ಹೀಗಾಗಿ ಲಾಕ್ ಡೌನ್ ವಿಸ್ತರಿಸುವುದು ಅನಿವಾರ್ಯ. ಲಾಕ್ ಡೌನ್ ಜೊತೆಗೆ ಸರ್ಕಾರ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಹೇಳಿದ್ದಾರೆ.

- Advertisement -

ರಾಜ್ಯ ಸರ್ಕಾರವು ಹಲವು ಕಡೆ ಕೋವಿಡ್ ಟೆಸ್ಟ್ ಗಳನ್ನು ಸ್ಥಗಿತಗೊಳಿಸಿದೆ. ಇದರಿಂದಾಗಿ ರಾಜ್ಯದಲ್ಲಿ ಮತ್ತಷ್ಟು ಸಾವು ನೋವುಗಳು ಹೆಚ್ಚಾಗುತ್ತವೆ. ರಾಜ್ಯ ಸರ್ಕಾರ ವೈಫಲ್ಯ ಮುಚ್ಚಿಕೊಳ್ಳುವುದಕ್ಕೆ ಹೊರಟಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -