Home ಟಾಪ್ ಸುದ್ದಿಗಳು ಪಿಜಿಸಿಇಟಿ-2024ರ ಪರೀಕ್ಷೆ ಮುಂದೂಡಿಕೆ

ಪಿಜಿಸಿಇಟಿ-2024ರ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲು ನಿಗದಿ ಪಡಿಸಲಾಗಿದ್ದ ಪಿಜಿಸಿಇಟಿ-2024ರ ಪರೀಕ್ಷೆಯನ್ನು ಮುಂದೂಡಲಾಗಿದೆ.

ಕೆಇಎ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಕೆಲವು ವಿಶ್ವವಿದ್ಯಾಲಯಗಳು 2024 ರ ಜುಲೈ 5 ಮತ್ತು 10 ರಿಂದ ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ಪ್ರಾರಂಭಿಸುತ್ತಿರುವುದರಿಂದ 2024 ರ ಜುಲೈ 13 ಮತ್ತು 14 ರಂದು ನಡೆಯಬೇಕಿದ್ದ ಪಿಜಿಸಿಇಟಿ -2024 ಪರೀಕ್ಷೆಯನ್ನು ಮುಂದೂಡುವಂತೆ ಅನೇಕ ವಿದ್ಯಾರ್ಥಿಗಳು ಕೆಇಎಗೆ ಮನವಿ ಸಲ್ಲಿಸಿದ್ದರು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಇಎ 2024ರ ಜುಲೈ 13 ಮತ್ತು 14ರಂದು ನಡೆಯಬೇಕಿದ್ದ ಪಿಜಿಸಿಇಟಿ-2024 ಪರೀಕ್ಷೆಯನ್ನು ಮುಂದೂಡಾಗಿದೆ. ಪರಿಷ್ಕೃತ ದಿನಾಂಕಗಳನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

ಅಲ್ಲದೆ, ಎಂಬಿಎ, ಎಂಸಿಎ, ಎಂಇ / M.Tech/M.Tech, M.ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶಕ್ಕಾಗಿ ಪಿಜಿಸಿಇಟಿ -2024ಗೆ ನೋಂದಾಯಿಸಲು ಮತ್ತು ಆನ್ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 26-06-2024 ರಂದು ಬೆಳಿಗ್ಗೆ 11.00 ರಿಂದ 07-07-2024- ರಾತ್ರಿ 11.59 ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ದಿನಾಂಕ 09-07-2024 ರ ಸಂಜೆ 6.00 ರೊಳಗೆ ಶುಲ್ಕವನ್ನು ಪಾವತಿಸಬಹುದು. ಆನ್ ಲೈನ್ ನಲ್ಲಿ ನೋಂದಾಯಿಸಲು ದಿನಾಂಕಗಳನ್ನು ಮತ್ತಷ್ಟು ವಿಸ್ತರಿಸಲಾಗುವುದಿಲ್ಲ ಎಂದೂ ತಿಳಿಸಲಾಗಿದೆ.

Join Whatsapp
Exit mobile version