ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮುಂದುವರೆದಿದ್ದು, ಲಗ್ಗೆರೆಯ ಸುಮಾರು 21 ವಾಹನಗಳ ಮೇಲೆ ದಾಳಿ ಮಾಡಿ ಧ್ವಂಸಗೊಳಿಸಿರುವ ಘಟನೆ ನಡೆದಿದೆ.
ನಸುಕಿನ ಮೂರು ಗಂಟೆಗೆ ದಾಳಿ ನಡೆಸಿದ್ದು, ಕಾರುಗಳು ಹಾಗೂ ದ್ವಿಚಕ್ರ ವಾಹನಗಳ ಮೇಲೆ ದಾಳಿ ಮಾಡಿ ಗಜುಗಳನ್ನು ಪುಡಿಪುಡಿ ಮಾಡಿದ್ದಾರೆ.
ನಸುಕಿನ ಜಾವದಲ್ಲಿ ಸುಮಾರು ಮೂರು ಜನ ಪುಡಿ ರೌಡಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ. ಬೆಳಿಗ್ಗೆ ಎದ್ದ ತಕ್ಷಣ ವಾಹನಗಳ ಮಾಲೀಕರು ತಮ್ಮ ವಾಹನಗಳು ಜಖಂ ಗೊಂಡಿರುವುದು ಹಾಗು ಗಾಜುಗಳು ಪುಡಿಪುಡಿ ಆಗಿರುವುದನ್ನು ನೋಡಿ ದಂಗಾಗಿದ್ದಾರೆ.
ರಸ್ತೆ ಎರಡು ಬದಿ ನಿಲ್ಲಿಸಿದ್ದ ಕಾರುಗಳು, ಆಟೋ ಹಾಗೂ ದ್ವಿಚಕ್ರ ವಾಹನಗಳ ಮೇಲೆ ಪುಡಿ ರೌಡಿಗಳು ದಾಳಿ ನಡೆಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ರಾಜಗೋಪಾಲ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.