ವಿದ್ಯುತ್ ದರ ಏರಿಕೆ ಅನಿವಾರ್ಯ: ಸುನಿಲ್ ಕುಮಾರ್

Prasthutha|

ಬೆಂಗಳೂರು: ವಿದ್ಯುತ್ ದರ ಏರಿಕೆ ಅನಿವಾರ್ಯ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಶುಕ್ರವಾರ ಹೇಳಿಕೆ ನೀಡಿದ್ದಾರೆ.

- Advertisement -

ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ನಾವು ಕೆಲವೊಂದಿಷ್ಟು ಯೋಜನೆ ಕೈಗೆತ್ತಿಕೊಳ್ಳುತ್ತಿದ್ದೇವೆ. 12 ಸಾವಿರ ಕೋಟಿಯಷ್ಟು ಬೇರೆ ಬೇರೆ ಇಲಾಖೆಯಿಂದ ಹಣ ಬರಬೇಕಾಗಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ, ನೀರಾವರಿ ಇಲಾಖೆ, ಬಿಡಬ್ಲ್ಯೂಎಸ್ಎಸ್ಬಿ ಸೇರಿ ಹಲವು ಇಲಾಖೆಗಳಿಂದ ಹಣ ಬಾಕಿ ಬರುವುದು ಬಾಕಿ ಇದೆ ಎಂದು ತಿಳಿಸಿದರು.

ಕೆಇಆರ್ ಸಿ – ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗ ಶಿಫಾರಸು ಮಾಡಿದರೆ ದರ ಏರಿಕೆ ಮಾಡುವುದು ಅನಿವಾರ್ಯ. ಮೊದಲು, ಅವರು ವರದಿ ಕೊಡಲಿ. ವರದಿ ಕೊಟ್ಟ ಬಳಿಕ ವಿದ್ಯುತ್ ದರ ಏರಿಕೆಗೆ ನಿರ್ಧರಿಸುತ್ತೇವೆ ಎಂದು ಹೇಳಿದರು.



Join Whatsapp