ಬೆಂಗಳೂರು: ಬೆಂಗಳೂರಿನ ಜೆಡಿಎಸ್ ಕಚೇರಿಯ ಗೋಡೆಗಳಲ್ಲಿ ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಎಂಬ ಪೋಸ್ಟರ್ ಗಳು ಮಂಗಳವಾರ ರಾತ್ರಿ ಕಂಡುಬಂದಿದೆ.
ಕಾಂಗ್ರೆಸ್ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಿವಾಸದ ದೀಪಾಲಂಕಾರಕ್ಕೆ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆದಿರುವ ಆರೋಪ ಎದುರಿಸುತ್ತಿರುವ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ವ್ಯಂಗ್ಯವಾಡಲು ಕಾಂಗ್ರೆಸ್ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.