Home ಟಾಪ್ ಸುದ್ದಿಗಳು ನ್ಯೂಸ್ ಕ್ಲಿಕ್ ಸ್ಥಾಪಕ ಪ್ರಬೀರ್ ಪುರಕಾಯಸ್ಥ ಬಂಧನ ಸರಿಯಾದ ಕ್ರಮವಲ್ಲ ಎಂದ ಸುಪ್ರೀಂ

ನ್ಯೂಸ್ ಕ್ಲಿಕ್ ಸ್ಥಾಪಕ ಪ್ರಬೀರ್ ಪುರಕಾಯಸ್ಥ ಬಂಧನ ಸರಿಯಾದ ಕ್ರಮವಲ್ಲ ಎಂದ ಸುಪ್ರೀಂ

ನವದೆಹಲಿ: ನ್ಯೂಸ್ ಕ್ಲಿಕ್ ಸುದ್ದಿತಾಣದ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಅವರನ್ನು ‘ಅಕ್ರಮ ಚಟುವಟಿಕೆ ತಡೆ ಕಾಯ್ದೆ’ (ಯುಎಪಿಎ) ಅಡಿಯಲ್ಲಿ ಬಂಧಿಸಿರುವುದು ಸರಿಯಾದ ಕ್ರಮವಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಪುರಕಾಯಸ್ಥ ಅವರ ಬಿಡುಗಡೆಗೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಈ ಆದೇಶ ಹೊರಡಿಸಿದೆ.

ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ತರಲು ಮತ್ತು ದೇಶದ ವಿರುದ್ಧ ಅವಿಶ್ವಾಸ ಮೂಡಿಸಲು ಚೀನಾದಿಂದ ಭಾರಿ ಪ್ರಮಾಣದ ಹಣ ಪಡೆಯಲಾಗಿದೆ ಎಂಬ ಆರೋಪದ ಮೇಲೆ ಕಳೆದ ವರ್ಷ ಅಕ್ಟೋಬರ್ನಲ್ಲಿ ಪುರಕಾಯಸ್ಥ ಹಾಗೂ ನ್ಯೂಸ್ ಕ್ಲಿಕ್ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು.

Join Whatsapp
Exit mobile version