ನಾನು ರಾಜೀನಾಮೆ ನೀಡುವ ಪ್ರಶ್ನೆ ಬರುವುದಿಲ್ಲ: ಪ್ರದೀಪ್‌ ಈಶ್ವರ್‌

Prasthutha|

- Advertisement -

ಚಿಕ್ಕಬಳ್ಳಾಪುರ: ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ.

ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡಬೇಕೆಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಜೀನಾಮೆಗೆ ಆಗ್ರಹ ಮಾಡಿದ ವಿರೋಧ ಪಕ್ಷದವರಿಗೆ ಧನ್ಯವಾದ. ಸುಧಾಕರ್‌ ಅವರು ನನ್ನ ಸವಾಲು ಸ್ವೀಕಾರ ಮಾಡಿರಲಿಲ್ಲ. ನನ್ನ ಸವಾಲು ಸ್ವೀಕರಿಸುತ್ತಿದ್ದರೆ ನಾನು ರಾಜೀನಾಮೆ ನೀಡುತ್ತಿದ್ದೆ ಎಂದು ಹೇಳಿದರು.

- Advertisement -

ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಹಣದ ಹೊಳೆ ಹರಿದಿದೆ. ಬಿಜೆಪಿಯವರು ನಾನು ರಾಜೀನಾಮೆ ಕೊಡಬಹುದು ಅಂತ ಕಾಯ್ತಿದ್ದಾರೆ. ನಾನು ರಾಜೀನಾಮೆ ಕೊಟ್ರೆ ನೆಮ್ಮದಿಯಾಗಿ ಇರಬಹುದು ಅಂದುಕೊಂಡಿದ್ದಾರೆ. ಆದರೆ ಅವರಿಗೆ ನಾನು ಆ ನೆಮ್ಮದಿ ಕೊಡಲ್ಲ ಎಂದು ಪ್ರದೀಪ್ ಈಶ್ವರ್ ತಿಳಿಸಿದರು.

Join Whatsapp
Exit mobile version