ನೃತ್ಯ ಮಾಡಿ ಮತ್ತೆ ವಿವಾದದಲ್ಲಿ ಸಿಲುಕಿದ ನ್ಯಾಯಾಲಯಕ್ಕೆ ಗಾಲಿಕುರ್ಚಿಯಲ್ಲಿ ಹಾಜರಾಗುತ್ತಿದ್ದ ಪ್ರಜ್ಞಾ ಸಿಂಗ್!

Prasthutha: July 9, 2021

ಭೋಪಾಲ್: ಅನಾರೋಗ್ಯದ ಕಾರಣ ನೀಡಿ ಮಾಲೆಗಾಂವ್ ಸ್ಪೋಟ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದ ಬಿಜೆಪಿ ನಾಯಕಿ, ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರ ಮದುವೆಯ ಮನೆಯಲ್ಲಿ ನೃತ್ಯ ಮಾಡುವ ವಿಡಿಯೋ ಈಗ ವೈರಲಾಗಿದೆ.

ಈ ಮೊದಲು ಬಾಸ್ಕೆಟ್‌ಬಾಲ್ ಆಡುತ್ತಿರುವ ವೀಡಿಯೋ ವೈರಲಾಗಿತ್ತು. ಇದೀಗ ಅವರು ನೃತ್ಯ ಮಾಡುವ ದೃಶ್ಯವೂ ವಿವಾದಕ್ಕೆ ಕಾರಣವಾಗಿದೆ. ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಪ್ರಜ್ಞಾ ಸಿಂಗ್ ಅವರು ಅನಾರೋಗ್ಯದ ಕಾರಣ ನೀಡಿ ಜಾಮೀನು ಪಡೆದಿದ್ದರು. ಆರೋಗ್ಯ ಸಮಸ್ಯೆಗಳಿಂದಾಗಿ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ತನಗೆ ನಡೆಯಲು ಸಾಧ್ಯವಾಗುತ್ತಿಲ್ಲ.ಗಾಲಿಕುರ್ಚಿಯಲ್ಲಿ ಮಾತ್ರ ಪ್ರಯಾಣಿಸಬಹುದೆಂದು ನ್ಯಾಯಾಲಯಕ್ಕೆ ತಿಳಿಸಿದ್ದರು.

ವೀಡಿಯೋ ವೀಕ್ಷಿಸಿ…

ಆದರೆ, ಪ್ರಜ್ಞಾ ತನ್ನ ಭೋಪಾಲ್ ನಿವಾಸದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಚಲನಚಿತ್ರ ಹಾಡಿಗೆ ನೃತ್ಯ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ