Home ಟಾಪ್ ಸುದ್ದಿಗಳು “ಪ್ರಜಾ ಧ್ವನಿ” ಬಸ್ ಯಾತ್ರೆಗೆ ಚಾಲನೆ

“ಪ್ರಜಾ ಧ್ವನಿ” ಬಸ್ ಯಾತ್ರೆಗೆ ಚಾಲನೆ

ಬೆಳಗಾವಿ: ನವ ಕರ್ನಾಟಕ ನಿರ್ಮಾಣ ಮಾಡುವ ಸಂಕಲ್ಪದೊಂದಿಗೆ ರಾಜ್ಯ ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರಜಾ ಧ್ವನಿ ಬಸ್ ಯಾತ್ರೆಗೆ ಬೆಳಗಾವಿಯ ವೀರಸೌಧದಲ್ಲಿ ಇಂದು ಚಾಲನೆ ನೀಡಲಾಯಿತು.


ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ನಮನ ಸಲ್ಲಿಸುವ ಮೂಲಕ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜಂಟಿಯಾಗಿ ಯಾತ್ರೆ ಆರಂಭಿಸಿದರು. ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಸಲೀಂ ಅಹಮದ್ ಸೇರಿದಂತೆ ಪಕ್ಷದ ಮುಖಂಡರು ಯಾತ್ರೆಗೆ ಜೊತೆಯಾದರು.

Join Whatsapp
Exit mobile version