January 14, 2021

ಗಾಂಧಿ ಹಂತಕ ಗೋಡ್ಸೆಯನ್ನು ದೇಶಭಕ್ತ ಎಂದ ಪ್ರಜ್ಞಾ ಸಿಂಗ್ ಠಾಕೂರ್

ಉಜ್ಜೈನಿ : ಮಹಾತ್ಮ ಗಾಂಧಿ ಹಂತಕ ನಾಥುರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆಯುವ ಮೂಲಕ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮತ್ತೊಮ್ಮೆ ವಿವಾದ ಎಬ್ಬಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಜ್ಞಾ ಸಿಂಗ್, “ಆ ಪಕ್ಷದವರು ಯಾವಾಗಲೂ ನಿಜವಾದ ದೇಶಭಕ್ತರನ್ನು ನಿಂದಿಸುತ್ತಾರೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಗೋಡ್ಸೆಯನ್ನು “ಮೊದಲ ಭಯೋತ್ಪಾದಕ” ಎಂದು ಹೇಳಿದ್ದ ಹಿನ್ನೆಲೆಯಲ್ಲಿ ಸಂಸದೆ ಪ್ರಜ್ಞಾ ಸಿಂಗ್ ಈ ಪ್ರತಿಕ್ರಿಯೆ ನೀಡಿದ್ದಾರೆ.

“ಕಾಂಗ್ರೆಸ್ ಯಾವಾಗಲೂ ನಿಜವಾದ ದೇಶಭಕ್ತರನ್ನು ನಿಂದಿಸುತ್ತದೆ. ಅವರನ್ನು ಕೇಸರಿ ಭಯೋತ್ಪಾದಕರು ಎಂದು ಕರೆಯುತ್ತದೆ. ಇದಕ್ಕಿಂತ ಕೆಟ್ಟದ್ದೇನನ್ನೂ ಹೇಳಲು ಸಾಧ್ಯವಿಲ್ಲ. ಈ ವಿಷಯದ ಬಗ್ಗೆ ಹೆಚ್ಚಿನದನ್ನು ಹೇಳಲು ನಾನು ಬಯಸುವುದಿಲ್ಲ” ಎಂದು ಗೋಡ್ಸೆ ಕುರಿತು ಪ್ರಜ್ಞಾ ಸಿಂಗ್ ಹೇಳಿದ್ದಾರೆ.  

ಟಾಪ್ ಸುದ್ದಿಗಳು

ವಿಶೇಷ ವರದಿ