ಪ್ರಜ್ವಲ್ ಕೇಸ್; ದೇಶದ ಎದುರು ಕರ್ನಾಟಕ ತಲೆತಗ್ಗಿಸುವಂತೆ ಮಾಡಿದೆ: ವೀರಪ್ಪ ಮೊಯ್ಲಿ

Prasthutha|

ಬೆಳಗಾವಿ: ದೇವೇಗೌಡರ ಕುಟುಂಬದ ಸದಸ್ಯರು ಹಾಸನವಷ್ಟೇ ಅಲ್ಲ ಕರ್ನಾಟಕದ ಹೆಸರು ಕೆಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ವಾಗ್ದಾಳಿ ನಡೆಸಿದರು.

- Advertisement -


ಬೆಳಗಾವಿಯಲ್ಲಿ ಮಾತನಾಡಿದ ಅವರು, ದೇವಗೌಡರ ಮಗ, ಮೊಮ್ಮಗನಿಂದ ಒಂದಲ್ಲ 2 ಸಾವಿರ ಮಹಿಳೆಯರ ಮೇಲೆ ದೌರ್ಜನ್ಯವಾಗಿದೆ. ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ ಕರ್ನಾಟಕದ ಹೆಸರು ಕೆಡಿಸಿದ್ದಾರೆ. ರಾಜಕೀಯ ಕೆಡಸಿದ್ದಾರೆ, ದೇಶದ ಎದುರು ಕರ್ನಾಟಕ ತಲೆತಗ್ಗಿಸುವಂತೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ನಾರಿಶಕ್ತಿ, ಬೇಟಿ ಪಡಾವೋ, ಬೇಟಿ ಬಚಾವೋ ಅಂತಾರೆ. ಭಾರತ ಸರ್ಕಾರದ ಬಳಿಯೇ ನ್ಯಾಷನಲ್ ಕ್ರೈಂ ರೆಕಾರ್ಡ್ ಮಾಹಿತಿ ಇದೆ. ಯುಪಿಎ ಸಮಯದಲ್ಲಿ ಮೂರು ಲಕ್ಷ ಮಹಿಳೆಯರ ಮೇಲೆ ದೌರ್ಜನ್ಯ ಆಗ್ತಿತ್ತು. ಈಗ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣಗಳ ಪ್ರಮಾಣ 22 ಲಕ್ಷ ದಾಟಿದೆ ಎಂದು ಕಿಡಿಕಾರಿದರು.

Join Whatsapp