ಪ್ರಜ್ವಲ್ ವಿರುದ್ಧ ಪ್ರಕರಣ: ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

Prasthutha|

ನವದೆಹಲಿ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪದ ಪ್ರಕರಣದಲ್ಲಿ; ಸಂತ್ರಸ್ತೆಯೊಬ್ಬರ ಅಪಹರಣದ ಆರೋಪಕ್ಕೆ ಗುರಿಯಾಗಿರುವ ಭವಾನಿ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

- Advertisement -


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಆದರೆ ನಿರೀಕ್ಷಣಾ ಜಾಮೀನು ರದ್ದುಗೊಳಿಸಲು ಕೋರಿ ಎಸ್ ಐಟಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.


ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ಮೇಲೆ ಭವಾನಿ ರೇವಣ್ಣ ಅವರಿಗೆ ನೋಟಿಸ್ ನೀಡಿದೆ.



Join Whatsapp