ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಗೊಳಿಸಲು ಕೆಲವು ಪ್ರಕ್ರಿಯೆಗಳು ಅಗತ್ಯ: ಪ್ರಲ್ಹಾದ್ ಜೋಶಿ

Prasthutha|

ಕಲಬುರಗಿ: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಪಡಿಸಲು ಕೆಲವು ವಿಧಾನಗಳನ್ನು ಅನುಸರಿಸಬೇಕಾಗಿದೆ ಮತ್ತು ಅವರನ್ನು ದೇಶಕ್ಕೆ ಕರೆತರುವಲ್ಲಿ ಕರ್ನಾಟಕ ಸರ್ಕಾರದೊಂದಿಗೆ ಸಹಕರಿಸಲು ಕೇಂದ್ರವು ಸಿದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

- Advertisement -


ರಾಜತಾಂತ್ರಿಕ ಪಾಸ್ ಪೋರ್ಟ್ ಗಳನ್ನು ಏಕಾಏಕಿ ರದ್ದುಗೊಳಿಸಲು ಸಾಧ್ಯವಾಗುವುದಿಲ್ಲ. ಆಪಾದಿತ ಲೈಂಗಿಕ ಕಿರುಕುಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಪ್ರಜ್ವಲ್ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ಒತ್ತಾಯಿಸಿ ನ್ಯಾಯಾಲಯದ ಮೆಟ್ಟಿಲೇರಿದೆ. ಪ್ರಜ್ವಲ್ ವಿಚಾರಣೆ ಎದುರಿಸಬೇಕು ಮತ್ತು ತಪ್ಪಿತಸ್ಥರಾಗಿದ್ದರೆ ಶಿಕ್ಷೆಯಾಗಬೇಕು ಎಂದು ಅವರು ಹೇಳಿದರು.

Join Whatsapp