ಪ್ರಜ್ವಲ್ ರೇವಣ್ಣರ ಪುರುಷತ್ವ ಪರೀಕ್ಷೆ ನಡೆಸಿದ ವೈದ್ಯರು

Prasthutha|

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣರ ಪುರುಷತ್ವ ಪರೀಕ್ಷೆ ನಡೆಸಲಾಗಿದೆ. ಬೌರಿಂಗ್ ಆಸ್ಪತ್ರೆ ಆವರಣದಲ್ಲಿರುವ ಅಟಲ್ ಬಿಹಾರಿ ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಪ್ರಜ್ವಲ್ ಅವರಿಗೆ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಪರೀಕ್ಷೆ ನಡೆದಿದೆ.

- Advertisement -

ಪುರುಷತ್ವ ಪರೀಕ್ಷೆ ಸಂಬಂಧ ನ್ಯಾಯಾಲಯದ ಅನುಮತಿ ಪಡೆದ ಎಸ್‌ಐಟಿ ಅಧಿಕಾರಿಗಳು ಬೌರಿಂಗ್ ಆಸ್ಪತ್ರೆಗೆ ಪ್ರಜ್ವಲ್ ಅವರನ್ನು ಭದ್ರತೆಯಲ್ಲಿ ಕರೆದೊಯ್ದರು. ವೈದ್ಯಕೀಯ ತಪಾಸಣೆ ಮುಗಿದ ಬಳಿಕ ಅವರನ್ನು ಮತ್ತೆ ಸಿಐಡಿ ಕಚೇರಿಗೆ ಕರೆತಂದು ಎಸ್‌ಐಟಿ ವಿಚಾರಣೆಗೊಳಪಡಿಸಿದೆ.

ಎರಡು ದಿನಗಳ ಹಿಂದೆ ಪುರುಷತ್ವ ಪರೀಕ್ಷೆ ಸಲುವಾಗಿ ಬೌರಿಂಗ್ ಆಸ್ಪತ್ರೆಗೆ ಪ್ರಜ್ವಲ್ ಅವರನ್ನು ಎಸ್ ಐಟಿ ಕರೆದುಕೊಂಡು ಹೋಗಿತ್ತು. ಆದರೆ ಆ ವೇಳೆ ಎಸ್‌ಐಟಿ ಸೂಚಿಸಿದ ಕೆಲ ವೈದ್ಯಕೀಯ ಪರೀಕ್ಷೆಗಳಿಗೆ ಕಾನೂನು ತೊಡಕಿನ ಬಗ್ಗೆ ವೈದ್ಯರು ತಿಳಿಸಿದರು. ಕೊನೆಗೆ ನ್ಯಾಯಾಲಯದ ಅನುಮತಿ ಪಡೆದು ಮತ್ತೆ ಪ್ರಜ್ವಲ್ ಅವರನ್ನು ಪುರುಷತ್ವ ಪರೀಕ್ಷೆಗೆ ಎಸ್‌ಐಟಿ ಕರೆದೊಯ್ದಿತು. ನ್ಯಾಯಾಲಯದ ಸಮ್ಮತಿ ಹಿನ್ನೆಲೆಯಲ್ಲಿ ಪ್ರಜ್ವಲ್ ಅವರ ವೈದ್ಯಕೀಯ ಪರೀಕ್ಷೆಗೆ ತಜ್ಞ ವೈದ್ಯರ ತಂಡವನ್ನು ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರು ರಚಿಸಿದ್ದರು.

- Advertisement -

ಇಂದು ನ್ಯಾಯಾಲಯಕ್ಕೆ ಹಾಜರು: ಎಸ್‌ಐಟಿ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ನಗರದ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮಾಜಿ ಸಂಸದ ಪ್ರಜ್ವಲ್ ಅವರನ್ನು ಇಂದು ಹಾರಜುಪಡಿಸಲಾಗುತ್ತದೆ.



Join Whatsapp