ಪ್ರಜ್ವಲ್ ರೇವಣ್ಣ ಮತ್ತೆ ಎಸ್‌ಐಟಿ ಕಸ್ಟಡಿಗೆ

Prasthutha|

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನು ಮತ್ತೆ ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮತ್ತೆ ಜೂನ್ 18ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ.

- Advertisement -

ಅತ್ಯಾಚಾರ ಆರೋಪ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ಎಸ್‌ಐಟಿ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಜೂ.10 ರಂದು ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಪ್ರಜ್ವಲ್ ರೇವಣ್ಣ ಅವರಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇದೀಗ ಮತ್ತೆ ಕೋರ್ಟ್​ಗೆ ಹಾಜರುಪಡಿಸಿ ಪುನಃ ಎಸ್​ಐಟಿ ಅಧಿಕಾರಿಗಳು ತಮ್ಮ ಕಸ್ಟಡಿಗೆ ಪಡೆದುಕೊಂಡು ವಿಚಾರಣೆಯಲ್ಲಿ ತೊಡಗಿದ್ದಾರೆ.

Join Whatsapp