ಪ್ರಜ್ವಲ್ ರೇವಣ್ಣ ಏರ್‌ ಪೋರ್ಟ್‌ ಗೆ ಬರುತ್ತಿದ್ದಂತೆ ಬಂಧನ: ಗೃಹ ಸಚಿವ ಪರಮೇಶ್ವರ್

Prasthutha|

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಎಸ್‌ ಐಟಿ ಅಧಿಕಾರಿಗಳು ಬಂಧಿಸುತ್ತಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.

- Advertisement -

ಪ್ರಜ್ವಲ್ ವಾಪಸ್ ಆಗುವ ಕುರಿತು ಮಾತನಾಡಿದ ಅವರು, ವಾರೆಂಟ್ ಇರುವುದರಿಂದ ಪ್ರಜ್ವಲ್ ರೇವಣ್ಣ ಅವರು ಬರುತ್ತಿದ್ದಂತೆ ಅರೆಸ್ಟ್ ಮಾಡಲೇಬೇಕಲ್ಲವೇ? ಎಸ್‌ ಐಟಿಯವರು ಅದನ್ನ ಗಮನಿಸ್ತಾರೆ. ಅವರ ವಿರುದ್ಧ ವಾರೆಂಟ್ ಇರುವುದರಿಂದ ಅರೆಸ್ಟ್ ಮಾಡಬೇಕಲ್ಲ, ಅದನ್ನ ಮಾಡ್ತಾರೆ ಎಂದು ಹೇಳಿದರು. ಎಲ್ಲಾ ರೀತಿಯಲ್ಲೂ ಕ್ರಮ ತೆಗೆದುಕೊಳ್ಳಬೇಕು. ವಾರೆಂಟ್ ಜಾರಿಯಾಗಿರುವುದರಿಂದ ಅರೆಸ್ಟ್ ಮಾಡಬೇಕು, ಅರೆಸ್ಟ್ ಮಾಡ್ತಾರೆ. ಎಸ್‌ ಐಟಿ ಅವರು ಕಾಯ್ತ ಇದ್ದಾರೆ. ಏರ್‌ ಪೋರ್ಟ್‌ ಗೆ ಬಂದ ಮೇಲೆ ಅರೆಸ್ಟ್ ಮಾಡ್ತಾರೆ. ನಂತರ ಅವರ ಹೇಳಿಕೆಗಳು ಮತ್ತೊಂದು ಪ್ರಕ್ರಿಯೆ ಶುರು ಆಗುತ್ತೆ ಎಂದರು.

Join Whatsapp