Home ಟಾಪ್ ಸುದ್ದಿಗಳು ಪ್ರಜ್ವಲ್ ರೇವಣ್ಣ ಕೇಸ್: ಹಾಸನ, ಬೆಂಗಳೂರಿನ ರೇವಣ್ಣ ನಿವಾಸಗಳ ಮೇಲೆ SIT ದಾಳಿ

ಪ್ರಜ್ವಲ್ ರೇವಣ್ಣ ಕೇಸ್: ಹಾಸನ, ಬೆಂಗಳೂರಿನ ರೇವಣ್ಣ ನಿವಾಸಗಳ ಮೇಲೆ SIT ದಾಳಿ

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ (SIT) ಬೆಂಗಳೂರು ಮತ್ತು ಹಾಸನದ ಮನೆ ಮತ್ತು ಫಾರ್ಮ್ ಹೌಸಗಳಲ್ಲಿ ದಾಳಿ ಮಾಡಿ ಸಾಕ್ಷ್ಯಾಧಾರಗಳನ್ನು ಕಲೆಹಾಕಿದೆ.


ಇಂದು ಬೆಳ್ಳಂಬೆಳಿಗ್ಗೆ ಪ್ರಜ್ವಲ್ ತೋಟದ ಮನೆಗೆ ಎಸ್ ಐಟಿ ಅಧಿಕಾರಿಗಳ ತಂಡ ರೇಡ್ ಮಾಡಿದ್ದು, ಐದು ಜನರ ತಂಡದಿಂದ ಹಾಸನ ಪಡುವಲಹಿಪ್ಪೆಯ ತೋಟದ ಮನೆಯಲ್ಲಿ ಪರಿಶೀಲನೆ ನಡೆದಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದ ತೀವ್ರ ಕಾರ್ಯಾಚರಣೆಗೆ ಇಳಿದಿರುವ ವಿಶೇಷ ತನಿಖಾ ತಂಡ ಎಚ್ ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಇಬ್ಬರ ಬೆಂಗಳೂರು ಹಾಗೂ ಹಾಸನ ಜಿಲ್ಲೆಯ ಮನೆಗಳು ಹಾಗೂ ಫಾರಂ ಹೌಸ್ ಗಳಿಗೆ ದಾಳಿ ನಡೆಸಿ ತೀವ್ರ ತಪಾಸಣೆ ನಡೆಸಿದೆ.

Join Whatsapp
Exit mobile version