ಹಾಸನ: ಮೊಮ್ಮಗ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್ ನಲ್ಲಿ ಕಾನೂನು ಹೋರಾಟ ನಡೆಸಲಿದ್ದಾರೆ” ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಪ್ರಜ್ವಲ್ ರೇವಣ್ಣರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ ಹೈಕೋರ್ಟ್ ತೀರ್ಪಿನ ಕುರಿತಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮುಚ್ಚಿಡಲು ಇಲ್ಲಿ ಏನೂ ಇಲ್ಲ. ಕೆಳ ನ್ಯಾಯಾಲಯಗಳಲ್ಲಿ ನ್ಯಾಯ ಸಿಗದಿದ್ದರೆ ಜನರು ಸಾಮಾನ್ಯವಾಗಿ ಸುಪ್ರೀಂ ಕೋರ್ಟ್ಗೆ ಹೋಗುತ್ತಾರೆ. ಅಂತೆಯೇ ಪ್ರಜ್ವಲ್ ಕೂಡ ಸುಪ್ರೀಂ ಕೋರ್ಟ್ ಮೊರೆ ಹೋಗುತ್ತಾರೆ. ಪ್ರಕರಣದ ವಿಷಯಗಳನ್ನು ಇನ್ನೂ ಅಧ್ಯಯನ ಮಾಡದೇ ಇರುವ ಕಾರಣ ನ್ಯಾಯಾಲಯದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ. ತೀರ್ಪಿನ ಸಂಪೂರ್ಣ ಅರಿವು ಪಡೆದು ಮಾತನಾಡುವೆ” ಎಂದರು.