Home ಟಾಪ್ ಸುದ್ದಿಗಳು ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈಕೋರ್ಟ್ ಆದೇಶ

ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈಕೋರ್ಟ್ ಆದೇಶ

ಬೆಂಗಳೂರು: ಕಳೆದ ಬಾರಿ ಸಂಸತ್ತು ಚುನಾವಣೆ ಸಂದರ್ಭ ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್‌ ಶುಕ್ರವಾರ ಆದೇಶ ಹೊರಡಿಸಿದೆ.

ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ಹೊರಡಿಸಿದೆ. 

ಏನಿದು ಪ್ರಕರಣ?
ಸುಳ್ಳು ಆದಾಯ ಪ್ರಮಾಣ ಪತ್ರ ಸಲ್ಲಿಕೆ ಆರೋಪ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿ ಬಂದಿತ್ತು. ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಕೋರಿ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಜಯಗೊಂಡಿರುವ ಅಂದಿನ ಬಿಜೆಪಿಯ ಅಭ್ಯರ್ಥಿ ಎ.ಮಂಜು ಸಲ್ಲಿಕೆ ಮಾಡಿದ್ದರು.

ಆದಾಯ ತೆರಿಗೆ ವಿವರಗಳಿಗೆ ಸಂಬಂಧಿಸಿದಂತೆ ಸಲ್ಲಿಸಿರುವ ದಾಖಲೆಗಳಲ್ಲಿ ಸುಳ್ಳು ಅಂಕಿ ಅಂಶಗಳಿಂದ ಕೂಡಿದೆ ಎಂದು ದೂರುದಾರರು ಗಂಭೀರ ಆರೋಪ ಮಾಡಿದ್ದರು.

ಎ.ಮಂಜು ಸದ್ಯ ಅರಕಲಗೂಡು ಕ್ಷೇತ್ರದ ಜೆಡಿಎಸ್ ಶಾಸಕರಾಗಿದ್ದಾರೆ

Join Whatsapp
Exit mobile version