ಪ್ರಜ್ವಲ್​ ರೇವಣ್ಣ ಅನರ್ಹ: ತಾತ ದೇವೇಗೌಡರ ಜೊತೆ ಚರ್ಚಿಸಿ ಸುಪ್ರೀಂಕೋರ್ಟ್​ ಗೆ ಅರ್ಜಿ ಸಲ್ಲಿಸಲು ತಯಾರಿ

Prasthutha|

- Advertisement -

ಹಾಸನ: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಅಕ್ರಮ ಎಸಗಿದ್ದಾರೆ ಎಂದು ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರ ಸದಸ್ಯತ್ವವನ್ನು ರದ್ದುಗೊಳಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ. ಜೊತೆಗೆ ಪ್ರಜ್ವಲ್‌ ರೇವಣ್ಣ‌ ಅವರು ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಆದೇಶ ನೀಡಿದೆ. ಹೀಗಾಗಿ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲು ಪ್ರಜ್ವಲ್‌ ರೇವಣ್ಣ ತಯಾರಿ ನಡೆಸಿದ್ದಾರೆ.

ಸೋಮವಾರವೇ ಸುಪ್ರೀಂಕೋರ್ಟ್​ ಗೆ ಅರ್ಜಿ ಸಲ್ಲಿಸಲು ಪ್ರಜ್ವಲ್‌ ರೇವಣ್ಣ ಮುಂದಾಗಿದ್ದಾರೆ. ಇಂದು ತಾತ ಮಾಜಿ ಪ್ರಧಾನಿ ದೇವೇಗೌಡರು, ತಂದೆ ಮಾಜಿ ಸಚಿವ ರೇವಣ್ಣ ಜೊತೆ ಈ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಇಂದು ಹೊಳೆನರಸೀಪುರದ ದೇವೇಶ್ವರ ಹಾಗೂ ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ನಡೆಯಲಿರುವ ಶ್ರಾವಣ ಮಾಸದ ಪೂಜೆಯಲ್ಲಿ ಭಾಗಿಯಾಗಲು ಮಾಜಿ ಪ್ರಧಾನಿ ದೇವೇಗೌಡರು ಅವರು ನಿನ್ನೆಯೇ ಹುಟ್ಟೂರಿಗೆ ಆಗಮಿಸಿದ್ದಾರೆ. ಸದ್ಯ ಇಂದು ಪೂಜೆ ಬಳಿಕ ಕೋರ್ಟ್ ತೀರ್ಪಿನ ಬಗ್ಗೆ ಪ್ರಜ್ವಲ್ ಹಾಗೂ ಕುಟುಂಬಸ್ಥರು ಚರ್ಚೆ ನಡೆಸಲಿದ್ದಾರೆ. ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿ ತೀರ್ಪಿಗೆ ತಡೆಯಾಜ್ಞೆ ತರುವ ಬಗ್ಗೆ ಚರ್ಚಿಸಲಿದ್ದಾರೆ.