ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್’ಗೆ ಪ್ರಜ್ವಲ್ ರೇವಣ್ಣ ಅರ್ಜಿ

Prasthutha|

ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಅಮಾನತುಗೊಂಡಿರುವ ಜೆಡಿಎಸ್ ಮುಖಂಡ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬುಧವಾರ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

- Advertisement -

ಅಶ್ಲೀಲ ವಿಡಿಯೋ ಬಹಿರಂಗವಾದ ಬಳಿಕ ವಿದೇಶಕ್ಕೆ ಪಲಾಯನ ಮಾಡಿರುವ ಪ್ರಜ್ವಲ್ ರೇವಣ್ಣ, ಮೇ 31 ರಂದು ಬೆಂಳೂರಿಗೆ ವಾಪಸ್ ಬರುವುದಾಗಿ ಇತ್ತೀಚೆಗಷ್ಟೇ ವಿಡಿಯೋ ಬಿಡುಗಡೆ ಮಾಡಿ, ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ ಅವರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿಲು ಎಸ್ಐಟಿ ಸಿದ್ಧತೆ ನಡೆಸಿದ್ದು, ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ.

Join Whatsapp