Home ಟಾಪ್ ಸುದ್ದಿಗಳು ಸಂಸದ ಸ್ಥಾನದಿಂದ ಅನರ್ಹ: ಮಧ್ಯಂತರ ತಡೆ ಕೋರಿ ಹೈಕೋರ್ಟ್ ಗೆ ಪ್ರಜ್ವಲ್ ರೇವಣ್ಣ ಅರ್ಜಿ

ಸಂಸದ ಸ್ಥಾನದಿಂದ ಅನರ್ಹ: ಮಧ್ಯಂತರ ತಡೆ ಕೋರಿ ಹೈಕೋರ್ಟ್ ಗೆ ಪ್ರಜ್ವಲ್ ರೇವಣ್ಣ ಅರ್ಜಿ

ಬೆಂಗಳೂರು: ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೊರಡಿಸಿರುವ ಆದೇಶಕ್ಕೆ ಮಧ್ಯಂತರ ತಡೆ ನೀಡುವಂತೆ ಕೋರಿ ಹೈಕೋರ್ಟ್ ಗೆ ಪ್ರಜ್ವಲ್ ರೇವಣ್ಣ ಮನವಿ ಸಲ್ಲಿಸಿದ್ದಾರೆ.


ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ವರೆಗೂ, ಎಂಪಿ ಸ್ಥಾನದಿಂದ ಅಸಿಂಧು ಆದೇಶಕ್ಕೆ ಮಧ್ಯಂತರ ತಡೆ ನೀಡುವಂತೆ ಕೋರಿ ಹೈಕೋರ್ಟ್ ಗೆ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಒದಗಿಸಿದ್ದ ಆರೋಪಗಳು ಸಾಬೀತಾಗಿರುವ ಹಿನ್ನೆಲೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಸದಸ್ಯ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ತೀರ್ಪು ನೀಡಿತ್ತು.

Join Whatsapp
Exit mobile version