ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡಕ್ಕೆ ಹೆಚ್ಚುವರಿಯಾಗಿ 18 ಮಂದಿ ಅಧಿಕಾರಿ-ಸಿಬ್ಬಂದಿ ನೇಮಕ ಮಾಡಲಾಗಿದೆ.
ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ ಮೂವರು ಎಸಿಪಿ ಸೇರಿ 19 ಮಂದಿ ಅಧಿಕಾರಿ-ಸಿಬ್ಬಂದಿ ನೇಮಿಸಲಾಗಿದೆ.
ಎಡಿಜಿಪಿ ಬಿ.ಕೆ.ಸಿಂಗ್, ಮೈಸೂರು ಎಸ್ಪಿ ಸೀಮಾ ಲಾಟ್ಕರ್, ಸುಮನ್ ಡಿ.ಪೆನ್ನೇಕರ್ ನೇತೃತ್ವದ ತಂಡ ತನಿಖೆ ಈಗಾಗಲೇ ಆರಂಭಿಸಿದ್ದು, ಹೆಚ್ಚುವರಿ 19 ಮಂದಿಯ ಸೇರ್ಪಡೆಯಿಂದ ಎಸ್‌ಐಟಿ ಮತ್ತಷ್ಟು ಬಲಗೊಂಡಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಗೆ ಹಾಜರಾಗುವಂತೆ ಆರೋಪಿಗಳಾದ ಎಚ್ ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಮಂಗಳವಾರ ನೋಟಿಸ್ ಜಾರಿಮಾಡಿದ್ದಾರೆ.