ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣ: ಪ್ರೀತಂ ಗೌಡ ಆಪ್ತರ ಹೋಟೆಲ್, ಬಾರ್‌ ಮೇಲೆ SIT ದಾಳಿ

Prasthutha|

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಅವರ ಆಪ್ತರಾದ ಶರತ್ ಹಾಗೂ ಕಿರಣ್ ಒಡೆತನದ ಹೋಟೆಲ್, ಬಾರ್ ಗಳ ಮೇಲೆ ದಾಳಿ ನಡೆಸಿದ್ದಾರೆ.

- Advertisement -

ಶರತ್ ಒಡೆತನದ ಕ್ವಾಲಿಟಿ ಬಾರ್ ಹಾಗೂ ಕಿರಣ್ ಒಡೆತನದ ಶ್ರೀಕೃಷ್ಣ ಹೋಟೆಲ್ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಈ ಮಧ್ಯೆ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರಾದ ಚೇತನ್​ ಹಾಗೂ ಲಿಖಿತ್​ ಗೌಡ ಪರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.

- Advertisement -

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್‌ಡ್ರೈವ್ ಇಟ್ಟುಕೊಂಡಿದ್ದ ಆರೋಪದ ಮೇರೆಗೆ ವಿಶೇಷ ತನಿಖಾ ದಳ ಮೇ 12ರಂದು ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರಾದ ಚೇತನ್​ ಹಾಗೂ ಲಿಖಿತ್​ ಗೌಡನನ್ನು ವಶಕ್ಕೆ ಪಡೆಯಲಾಗಿತ್ತು. ಇಬ್ಬರು ನ್ಯಾಯಾಂಗ ಬಂಧನದಲ್ಲಿದ್ದಾರೆ.



Join Whatsapp