ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ.
ಬರೋಬ್ಬರಿ ಒಂದು ತಿಂಗಳ ಬಳಿಕ ವಿದೇಶದಲ್ಲಿದ್ದುಕೊಂಡು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಇದೇ ಮೇ 31ರಂದು ಬೆಳಗ್ಗೆ 10.30ಕ್ಕೆ ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ. ವಿಡಿಯೋದಲ್ಲಿ ತಂದೆ- ತಾಯಿ, ತಾತನ ಕ್ಷಮೆಯಾಚಿಸಿದ್ದಾರೆ. ಅಲ್ಲದೇ ಜನರು, ಪಕ್ಷದ ಕಾರ್ಯಕರ್ತರ ಬಳಿಯೂ ಕ್ಷಮೆ ಕೋರಿದ್ದಾರೆ. ಇನ್ನು ವಿದೇಶಕ್ಕೆ ತೆರಳಿರುವ ಬಗ್ಗೆ ಪ್ರತಿಕ್ರಿಯಿಸಿದ್ದು, ನನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು ಎಂದು ವಿಡಿಯೋದಲ್ಲಿ ಸ್ಪಷ್ಟಪಡಿಸಿದ್ದಾರೆ.
ನನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು. ವಿದೇಶಕ್ಕೆ ಹೋದ ಮೂರ್ನಾಲ್ಕು ದಿನದ ಬಳಿಕ ಪ್ರಕರಣದ ಬಗ್ಗೆ ಮಾಹಿತಿ ಗೊತ್ತಾಗಿದೆ. ಏಪ್ರಿಲ್ 26ರಂದು ಚುನಾವಣೆ ನಡೆಯಿತು. ಆಗ ಕೇಸ್ ದಾಖಲಾಗಿರಲಿಲ್ಲ. ಎಸ್ಐಟಿ ಕೂಡ ರಚನೆ ಆಗಿರಲಿಲ್ಲ. ಆ ನಂತರ ಎಸ್ಐಟಿ ನೋಟಿಸ್ ನೀಡಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಆದ್ರೆ, ನನ್ನ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು-ಪ್ರಜ್ವಲ್ ರೇವಣ್ಣ ಎಂದು ವಿದೇಶದಿಂದ ವಿಡಿಯೋ ರಿಲೀಸ್ ಮಾಡಿದ್ದಾರೆ.