ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಬೇಕು: ಮಾರಸಂದ್ರ ಮುನಿಯಪ್ಪ

Prasthutha|

ಬೀದರ್‌: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಬೇಕು ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಆಗ್ರಹಿಸಿದ್ದಾರೆ.

- Advertisement -

ಪ್ರಜ್ವಲ್‌ ರೇವಣ್ಣನಿಗೆ ಸಂಬಂಧಿಸಿದ ಪೆನ್‌ಡ್ರೈವ್‌, ಸಿ.ಡಿಗಳು ಎಲ್ಲಾ ಕಡೆಗಳಲ್ಲಿ ಓಡಾಡುತ್ತಿರುವೆ. ಮಾಜಿಪ್ರಧಾನಿ ಎಚ್‌.ಡಿ. ದೇವೇಗೌಡರ ಮಗ, ಮೊಮ್ಮಗನ ಸಿ.ಡಿನಗಳಿಂದ ದೇಶದ ಮಾನ, ಮರ್ಯಾದೆ ಹೋಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಕುರಿತು ಪ್ರಧಾನಿಗೆ ಪತ್ರ ಬರೆಯುವುದರ ಬದಲು ಬಂಧಿಸಬೇಕು ಎಂದು ನಗರದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಒತ್ತಾಯಿಸಿದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನವರು ಭ್ರಷ್ಟರೆಂದು ಬಿಜೆಪಿಯವರು, ಬಿಜೆಪಿಯವರು ಭ್ರಷ್ಟರೆಂದು ಕಾಂಗ್ರೆಸ್‌ನವರು ಆರೋಪಿಸುತ್ತಿದ್ದಾರೆ. ಕಾಂಗ್ರೆಸ್ ಸುದೀರ್ಘ ಅವಧಿ ಈ ದೇಶ ಆಳಿದೆ. ಬಹುಜನರನ್ನು ಮತ ಬ್ಯಾಂಕ್‌ ಆಗಿ ಉಪಯೋಗಿಸಿಕೊಂಡಿದೆ. ಮನುವಾದಿ ಬಿಜೆಪಿ ಸರ್ಕಾರ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗೀಕರಣ ಮಾಡಿದೆ. ಸಂಸತ್ತು,, ವಿಧಾನಸಭೆ ಮಾತ್ರ ಖಾಸಗೀಕರಣ ಆಗುವುದು ಬಾಕಿ ಉಳಿದಿದೆ. ಶೇ‌ 90ರಷ್ಟು ದೇಶದ ಆಸ್ತಿ ಖಾಸಗೀಕರಣ ಮಾಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

Join Whatsapp