ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್

Prasthutha|

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿ ವಜಾಗೊಂಡಿದೆ.

- Advertisement -

ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ.


ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ಸೆರೆವಾಸ ಮುಂದುವರೆಯಲಿದೆ.

- Advertisement -

ನಿನ್ನೆ ಸಹೋದರ ಸೂರಜ್ ರೇವಣ್ಣ ಅವರು ಜಾಮೀನಿನ ಮೇಲೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಇದರ ಖುಷಿಯಲ್ಲಿದ್ದ ಕುಟುಂಬಸ್ಥರು ಇಂದು ಪ್ರಜ್ವಲ್​ ಗೂ ಜಾಮೀನು ಸಿಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದರು. ಆದ್ರೆ, ಕೋರ್ಟ್​, ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ, ಈ ಹಿನ್ನೆಲೆಯಲ್ಲಿ ಪ್ರಜ್ವಲ್ ಸೇರಿದಂತೆ ರೇವಣ್ಣ ಕುಟುಂಬಕ್ಕೆ ಶಾಕ್ ಆಗಿದೆ.



Join Whatsapp