Home ಟಾಪ್ ಸುದ್ದಿಗಳು ವಕೀಲರೊಂದಿಗೆ ಚರ್ಚಿಸಿ ಮುಂದಿನ ಕಾನೂನು ಹೋರಾಟದ ಬಗ್ಗೆ ತೀರ್ಮಾನ: ಪ್ರಜ್ವಲ್ ರೇವಣ್ಣ ಫಸ್ಟ್ ರಿಯಾಕ್ಷನ್

ವಕೀಲರೊಂದಿಗೆ ಚರ್ಚಿಸಿ ಮುಂದಿನ ಕಾನೂನು ಹೋರಾಟದ ಬಗ್ಗೆ ತೀರ್ಮಾನ: ಪ್ರಜ್ವಲ್ ರೇವಣ್ಣ ಫಸ್ಟ್ ರಿಯಾಕ್ಷನ್

ಹಾಸನ: ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದ ಬಳಿಕ ಪ್ರಜ್ಚಲ್ ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.


ಈ ಬಗ್ಗೆ ಹಾಸನದಲ್ಲಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಪ್ರಜ್ವಲ್ ರೇವಣ್ಣ, ಬಳಿಕ ತಮ್ಮ ಸ್ವಗ್ರಾಮ ಹೊಳೆನರಸೀಪುರ ನಿವಾಸದಲ್ಲಿ ಮಾಧ್ಯಮಗಳಿಗೆ ಮೊದಲ ಹೇಳಿಕೆ ನೀಡಿದ್ದಾರೆ. ‘ನಾನು ವಕೀಲರೊಂದಿಗೆ ಚರ್ಚಿಸಿ ಮುಂದಿನ ಕಾನೂನು ಹೋರಾಟದ ಬಗ್ಗೆ ತೀರ್ಮಾನ ಮಾಡುತ್ತೇನೆ. ಇದು ದೇವರ ಪರೀಕ್ಷೆ ಅಷ್ಟೇ. ಕೋರ್ಟ್ ತೀರ್ಪಿನ ಬಗ್ಗೆ ಮಧ್ಯಾಹ್ನ ಗೊತ್ತಾಯ್ತು. ಅದರ ತೀರ್ಪಿಗೆ ಎಲ್ಲರೂ ತಲೆ ಬಾಗಲೇಬೇಕು. ಹಾಗಾಗಿ ಮುಂದೇನು ಮಾಡಬೇಕು? ಎಂದು ನನ್ನ ತಂದೆ ಹಾಗೂ ದೇವೇಗೌಡರ ಜೊತೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ’ ಎಂದು ತಿಳಿಸಿದರು.


ಹಲವು ವಿಚಾರಗಳ ಅಡಿಯಲ್ಲಿ ದೂರು ದಾಖಲಾಗಿದೆ. ಕಳೆದ ಒಂದೂವರೆ ವರ್ಷಗಳಿಂದ ನಾನು ಕೋರ್ಟ್ಗೆ ಹಾಜರಾಗುತ್ತಿದ್ದೇನೆ. ಯಾವ ವಿಚಾರದಲ್ಲಿ ತೀರ್ಪು ಬಂದಿದೆ ಎಂದು ನೋಡಬೇಕಾಗುತ್ತದೆ. ಹಾಗೆಯೇ ಕಾನೂನಾತ್ಮಕವಾಗಿ ಏನು ಮಾಡಬೇಕೋ ಮಾಡೇ ಮಾಡುತ್ತೇವೆ ಎಂದರು.


ಮುಂದಿನ 6 ವರ್ಷ ಚುನಾವಣೆಗೆ ನಿಲ್ಲುವ ಹಾಗಿಲ್ಲ ಎಂಬ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಇಂತಹ ಆದೇಶ ಎಲ್ಲಿ ಬಂದಿದೆ? ಕೇವಲ ಸದಸ್ಯತ್ವ ಅಸಿಂಧುಗೊಳಿಸಲಾಗಿದೆ ಅಷ್ಟೇ. ಮುಂದೆ ಎಲ್ಲೆಲ್ಲಿ ಹೋಗಿ ವಕೀಲರ ಭೇಟಿ ಮಾಡಬೇಕೊ ಮಾಡ್ತಿವಿ. 6 ವರ್ಷ ನಿಲ್ಲುವ ಹಾಗಿಲ್ಲ ಎಂದು ಎಲ್ಲಿ ಹೇಳಿದ್ದಾರೆ? ಇದೆಲ್ಲವೂ ಊಹಾಪೋಹ. ವಕೀಲರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇದೆಲ್ಲಾ ದೇವರ ಪರೀಕ್ಷೆ ಅಷ್ಟೇ, ಮುಂದೆ ಏನೇನಾಗುತ್ತೆ ನೋಡೋಣ ಯಾಕೆ ತಲೆಕೆಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

Join Whatsapp
Exit mobile version