ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಎಸ್ ಐಟಿ ಕಸ್ಟಡಿ ಅವಧಿ ವಿಸ್ತರಿಸಿದ ಕೋರ್ಟ್

Prasthutha|

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣನ ಎಸ್ ಐಟಿ ಕಸ್ಟಡಿ ಅವಧಿ ವಿಸ್ತರಣೆಯಾಗಿದೆ.

- Advertisement -

ಇಂದಿಗೆ ಐಎಸ್ ಟಿ ಕಸ್ಟಡಿ ಮುಗಿದಿದ್ದರಿಂದ ಪ್ರಜ್ವಲ್ ಅವರನ್ನು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ಪ್ರಜ್ವಲ್ ರೇವಣ್ಣ ಅವರನ್ನು ಇನ್ನಷ್ಟು ವಿಚಾರಣೆ ನಡೆಸಬೇಕಿದೆ, ಹೀಗಾಗಿ ಅವರನ್ನು ಇನ್ನಷ್ಟು ದಿನಗಳ ಕಾಲ ಎಸ್ ಐಟಿ ವಶಕ್ಕೆ ನೀಡಬೇಕೆಂದು ಎಸ್ ಐಟಿ ಪರ ವಕೀಲರು ಮನವಿ ಮಾಡಿದರು. ಇದನ್ನು ಪರಿಗಣಿಸಿದ ಕೋರ್ಟ್, ಪ್ರಜ್ವಲ್ ರೇವಣ್ಣ ಎಸ್ ಐಟಿ ಕಸ್ಟಡಿ ಅವಧಿಯನ್ನು ಜೂನ್ 10ರ ವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.



Join Whatsapp