Home ಟಾಪ್ ಸುದ್ದಿಗಳು ಪ್ರಕಾಶ್ ರಾಜ್’ಗೆ ಸಂಘಪರಿವಾರದ ಕಾರ್ಯಕರ್ತನಿಂದ ಕೊಲೆ ಬೆದರಿಕೆ

ಪ್ರಕಾಶ್ ರಾಜ್’ಗೆ ಸಂಘಪರಿವಾರದ ಕಾರ್ಯಕರ್ತನಿಂದ ಕೊಲೆ ಬೆದರಿಕೆ

ಬೆಂಗಳೂರು: ನಟ ಪ್ರಕಾಶ್ ರಾಜ್ ಅವರಿಗೆ ಸಂಘಪರಿವಾರದ ಕಾರ್ಯಕರ್ತನೋರ್ವ ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಬೆದರಿಕೆ ಹಾಕಿದ್ದಾರೆ.


ಫೇಸ್ಬುಕ್ ಲೈವ್ ನಲ್ಲಿ ಜೀವ ಬೆದರಿಕೆ ಹಾಕಿರುವ ವೀಡಿಯೊ ವೈರಲ್ ಆಗಿದೆ. ಸೌಜನ್ಯ ಅತ್ಯಾಚಾರ, ಕೊಲೆ ಕೊಲೆ ಪ್ರಕರಣದ ಬಗ್ಗೆ ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಪತ್ರಿಕಾ ಸಂವಾದದಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಕಾಶ್ ರಾಜ್ ಅವರು, ”ʼಗುಪ್ತಚರ ಇಲಾಖೆಗೆ ಅನುಮಾನಗಳಿದ್ದರೆ ಧರ್ಮಾಧಿಕಾರಿಗಳನ್ನೂ ಮಂಪರು ಪರೀಕ್ಷೆಗೆ ಒಳಪಡಿಸುವುದರಲ್ಲಿ ತಪ್ಪೇನಿದೆ” ಎಂದು ಪ್ರಶ್ನೆ ಮಾಡಿದ್ದರು.


ಪ್ರಕಾಶ್ ರಾಜ್ ಅವರು ಈ ಹೇಳಿಕೆಗೆ ಸಂಘಪರಿವಾರದ ಕಾರ್ಯಕರ್ತ ಸಂತೋಷ್ ಕಾರ್ತಾಳ್ ಎಂಬಾತ, ಧರ್ಮಾಧಿಕಾರಿಗಳ ಕ್ಷಮೆ ಕೇಳದಿದ್ದರೆ 24 ಗಂಟೆಯೊಳಗಡೆ ನಿನ್ನ ಮನೆ ಮುಂದೆ ನಿನ್ನ ಹೆಣ ಬಿದ್ದಿರುತ್ತದೆ” ಎಂದು ಕೊಲೆ ಬೆದರಿಕೆ ಹಾಕಿದ್ದಾನೆ.


ಈ ಬಗ್ಗೆ ಪ್ರಕಾಶ್ ರಾಜ್ ಅವರು ಟ್ವೀಟ್ ಮಾಡಿದ್ದು, , ”ನೊಡ್ರಪಾ.. ಉತ್ತರ ಕುಮಾರರು .. ಕೊಲೆ ಬೆದರಿಕೆ ಹಾಕ್ತಾ ಇದ್ದಾರೆ .. ಏನ್ ಮಾಡಾಣ ವಸಿ ಯೋಳಿ” ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಗೃಹ ಸಚಿವ ಡಾ.ಜಿ ಪರಮೇಶ್ವರ್ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಟ್ಯಾಗ್ ಮಾಡಿದ್ದಾರೆ.

Join Whatsapp
Exit mobile version