Home ಟಾಪ್ ಸುದ್ದಿಗಳು ಮಾರ್ಗರೇಟ್ ಆಳ್ವಾ ಅವರ ಫೋನ್ ಟ್ಯಾಪ್ ಆರೋಪದಲ್ಲಿ ಹುರುಳಿಲ್ಲ ಎಂದ ಪ್ರಲ್ಹಾದ್ ಜೋಶಿ

ಮಾರ್ಗರೇಟ್ ಆಳ್ವಾ ಅವರ ಫೋನ್ ಟ್ಯಾಪ್ ಆರೋಪದಲ್ಲಿ ಹುರುಳಿಲ್ಲ ಎಂದ ಪ್ರಲ್ಹಾದ್ ಜೋಶಿ

ನವದೆಹಲಿ: ಉಪರಾಷ್ಟ್ರಪತಿ ಅಭ್ಯರ್ಥಿ ಮಾರ್ಗರೇಟ್ ಆಳ್ವಾ ಅವರ ಫೋನ್ ಟ್ಯಾಪ್ ಆರೋಪವನ್ನು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅಲ್ಲಗೆಳೆದಿದ್ದಾರೆ.

ಮಾರ್ಗರೇಟ್ ಆಳ್ವಾ ಅವರ ಫೋನ್ ಅನ್ನು ಯಾರು ಏಕೆ ಟ್ಯಾಪ್ ಮಾಡಬೇಕು..? ಉಪರಾಷ್ಟ್ರಪತಿ ಚುನಾವಣೆಯಲ್ಲಿ ಫಲಿತಾಂಶ ಏನು ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಹೀಗಿರುವಾಗ ಆಳ್ವಾ ಅವರ ಫೋನನ್ನು ಟ್ಯಾಪ್ ಮಾಡುವ ಅಗತ್ಯತೆ ನಮಗಿಲ್ಲ. ಅಂಥಹ ಕೀಳು ಮಟ್ಟದ ರಾಜಕಾರಣವನ್ನು ಬಿಜೆಪಿ ಮಾಡುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ..

ಇಂದು ಬಿಜೆಪಿಯ ಕೆಲವು ಸ್ನೇಹಿತರೊಂದಿಗೆ ಮಾತನಾಡಿದೆ. ಆ ನಂತರ ನನ್ನ ಮೊಬೈಲ್ ಗೆ ಎಲ್ಲಾ ಕರೆಗಳನ್ನು ಡೈವರ್ಟ್ ಮಾಡಲಾಗುತ್ತಿದೆ ಎಂದು ಮಾರ್ಗರೇಟ್ ಆಳ್ವಾ ಅವರು ಆರೋಪಿಸಿದ್ದರು. ನನ್ನ ಫೋನ್ ಟ್ಯಾಪ್ ಆಗಿದ್ದು, ನನಗೆ ಕರೆ ಮಾಡಲು ಅಥವಾ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ನನ್ನ ಫೋನ್ ಸರಿಮಾಡಿದರೆ, ಇಂದು ರಾತ್ರಿ ಬಿಜೆಪಿ, ಟಿಎಂಸಿ ಅಥವಾ ಬಿಜೆಡಿಯಿಂದ ಯಾವುದೇ ಸಂಸದರನ್ನು ಕರೆಯುವುದಿಲ್ಲ ಎಂಬ ಭರವಸೆ ನೀಡುತ್ತೇನೆ ಎಂದು ಬಿಜೆಪಿಯನ್ನ ಗುರಿಯಾಗಿಸಿ ಟ್ವೀಟ್ ಮಾಡಿದ್ದರು.

Join Whatsapp
Exit mobile version