ಪ್ರಲ್ಹಾದ್ ಜೋಶಿಯವರೇ, ನಿಮ್ಮ ಕುತಂತ್ರ ನಮ್ಮ ಮುಂದೆ ನಡೆಯುವುದಿಲ್ಲ: ದಿಂಗಾಲೇಶ್ವರ ಶ್ರೀ

Prasthutha|

ಬೆಂಗಳೂರು: ‘ಪ್ರಲ್ಹಾದ ಜೋಶಿಯವರ ಚೇಲಾಗಳು ಸಾಮಾಜಿಕ ಜಾಲತಾಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. ಜೋಶಿಯವರೇ, ನಿಮ್ಮ ಯಾವುದೇ ಕುತಂತ್ರ ನಮ್ಮ ಮುಂದೆ ನಡೆಯುವುದಿಲ್ಲ’ ಎಂದು ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿರುವ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.

- Advertisement -


ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಜೋಶಿಯವರ ದುರಾಡಳಿತ ಬಗ್ಗೆ ಹೈಕಮಾಂಡ್ ನಾಯಕರು ಗಮನಹರಿಸುತ್ತಿಲ್ಲ. ಅವರಿಗೆ ಅದೇ ಬೇಕಾಗಿದೆ ಅನಿಸುತ್ತೆ. ಹೀಗಾಗಿ ಈ ದಿಂಗಾಲೇಶ್ವರ ರಾಜಕೀಯ ಪ್ರವೇಶ ಮಾಡಬೇಕಾಯಿತು. ಸ್ಪರ್ಧೆ ಮಾಡುವಂತೆ ಮತದಾರರು ನನಗೆ ಒತ್ತಾಯ ಮಾಡಿದ್ದಾರೆ’ ಎಂದರು.



Join Whatsapp