ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.
ಹಲವು ದಿನಗಳಿಂದ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ತೊರೆಯುವ ಬಗ್ಗೆ ಮಾತುಗಳನ್ನಾಡುತ್ತಿದ್ದರು. ಆದರೆ ಇಂದು ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಇವರು ಕಳೆದ ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು.