ಮುತಾಲಿಕ್ ಸ್ಪರ್ಧೆಯಿಂದ ಹಿಂದುತ್ವ ಪರ ರಾಜಕೀಯ ಪಕ್ಷಕ್ಕೆ ಹಿನ್ನಡೆ: ಸುನಿಲ್ ಕುಮಾರ್

Prasthutha|

ಗಂಗಾವತಿ: ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಕಾರ್ಕಳದಿಂದ ಸ್ಪರ್ಧಿಸುತ್ತಿರುವುದು ಹಿಂದುತ್ವ ಪರ ರಾಜಕೀಯ ಪಕ್ಷಕ್ಕೆ ಹಿನ್ನೆಡೆಯಾಗಲಿದೆ. ಇದನ್ನು ಅವರು ತಿಳಿದುಕೊಳ್ಳಬೇಕು ಎಂದು ಸಚಿವ ಸುನಿಲ್ ಕುಮಾರ್ ಹೇಳಿಕೆ ನೀಡಿದ್ದಾರೆ.

- Advertisement -

ಕೊಪ್ಪಳ ಜಿಲ್ಲೆಯ ಗಂಗಾವತಿಯ ಶ್ರೀರಾಮ ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಸರಕಾರ ಬಂದ ನಂತರ ಕೇವಲ ಒಬ್ಬ ಹಿಂದೂ ಕಾರ್ಯಕರ್ತನ ಹತ್ಯೆಯಾಗಿದೆ. ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಒಟ್ಟು 18 ಹಿಂದೂ ಕಾರ್ಯಕರ್ತರ ಹತ್ಯೆಯಾಗಿತ್ತು. ಬಿಜೆಪಿ ಸರಕಾರವು ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ, ಹಿಜಾಬ್ ಕುರಿತು ಕಾಯ್ದೆ ರೂಪಿಸಿದೆ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ಹೀಗಾಗಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಎಲ್ಲಿ ಬೇಕಾದರೂ ಸ್ಪರ್ಧಿಸಲಿ. ಬಿಜೆಪಿಗೆ ರಾಜ್ಯದ 224 ಕ್ಷೇತ್ರ ಇದೆ. ಚುನಾವಣೆ ಹತ್ತಿರ ಬರಲಿ ಎಲ್ಲವೂ ಗೊತ್ತಾಗಲಿದೆ ಎಂದು ಸುನಿಲ್ ಕುಮಾರ್ ಹೇಳಿದ್ದಾರೆ.

Join Whatsapp