ಆನೇಕಲ್: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿ ಗೋವಿಂದಬಾಬುಗೆ ಚೈತ್ರಾ ಮತ್ತು ಗ್ಯಾಂಗ್ 5 ಕೋಟಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಅಭಿನವ ಹಾಲಶ್ರೀ ಬಿಡುಗಡೆಯಾಗಿದ್ದಾರೆ.
ಜೈಲಿನಿಂದ ಹೊರ ಬರುತ್ತಿದ್ದಂತೆಯೇ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಕೇಸರಿ ಶಾಲು ಹಾಕಿ ಸ್ವಾಗತ ಕೋರಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹಾಲಶ್ರೀ, ಪ್ರತ್ಯಕ್ಷವಾಗಿ ಕಂಡರು ಪ್ರಮಾಣಿಸಿ ನೋಡಬೇಕು. ಅದನ್ನು ಪ್ರಕರಣದ ತನಿಖೆ ವೇಳೆ ಪರಿಗಣಿಸಬೇಕು. ಮುಂದೊಂದು ದಿನ ಈ ಪ್ರಕರಣದ ಬಗ್ಗೆ ಮಾತನಾಡುತ್ತೇನೆ ಎಂದರು.