ಪಂಜಾಬ್ ಸಿಎಂ ಸಲಹೆಗಾರ ಸ್ಥಾನಕ್ಕೆ ಪ್ರಶಾಂತ್ ಕಿಶೋರ್ ರಾಜೀನಾಮೆ!

Prasthutha|

ನವದೆಹಲಿ, ಆ.5: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಪ್ರಧಾನ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -

“ಸಾರ್ವಜನಿಕ ಜೀವನದಲ್ಲಿ ಸಕ್ರಿಯ ಪಾತ್ರದಿಂದ ತಾತ್ಕಾಲಿಕ ವಿರಾಮ ತೆಗೆದುಕೊಳ್ಳುತ್ತೇನೆ” ಎಂದು ಅವರು ತಿಳಿಸಿದ್ದಾರೆ.

ಮುಂದಿನ ನಡೆಯ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದೂ ಕಿಶೋರ್ ಸ್ಪಷ್ಟಪಡಿಸಿದ್ದಾರೆ.

- Advertisement -

ನಿಮಗೆ ತಿಳಿದಿರುವಂತೆ, ಸಾರ್ವಜನಿಕ ಜೀವನದಲ್ಲಿ ಸಕ್ರಿಯ ಪಾತ್ರದಿಂದ ತಾತ್ಕಾಲಿಕ ವಿರಾಮ ತೆಗೆದುಕೊಳ್ಳುವ ನನ್ನ ನಿರ್ಧಾರದ ದೃಷ್ಟಿಯಿಂದ, ನಿಮ್ಮ ಪ್ರಧಾನ ಸಲಹೆಗಾರನಾಗಿ ನಾನು ಜವಾಬ್ದಾರಿಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ನನ್ನ ಮುಂದಿನ ಭವಿಷ್ಯದ ಬಗ್ಗೆ  ಇನ್ನೂ ನಿರ್ಧರಿಸಿಲ್ಲ , ಈ ಜವಾಬ್ದಾರಿಯಿಂದ ನನ್ನನ್ನು ಮುಕ್ತಗೊಳಿಸುವಂತೆ ವಿನಂತಿಸಲು ಈ ಪತ್ರ ಬರೆಯುತ್ತಿದ್ದೇನೆ ಎಂದು ಕಿಶೋರ್ ಪತ್ರದಲ್ಲಿ ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದರು. ಅವರು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ ವದಂತಿ ಕೂಡ ಹಬ್ಬಿತ್ತು. ಇದೀಗ ಅವರ ಈ ನಡೆ ಕಾಂಗ್ರೆಸ್ ಸೇರ್ಪಡೆ ಎಂಬ ಮಾತಿಗೆ ಮತ್ತಷ್ಟು ಬಲ ನೀಡಿದೆ.

Join Whatsapp