ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸದಸ್ಯತ್ವ ರದ್ದತಿಯನ್ನು ಸಮರ್ಥಿಸುವ ಭರದಲ್ಲಿ ಟಿವಿ ನಟ ಹಾಗೂ ಸಂಘಪರಿವಾರದ ಬೆಂಬಲಿಗ ಪ್ರಶಾಂತ್ ಸಂಬರಗಿ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಅವಮಾನಿಸುವ ಘಟನೆ ನಡೆದಿದೆ.
ʻʻದೇವೇ ಗೌಡ ಕಳ್ಳ ಅನ್ನೋದಕ್ಕೂ, ಗೌಡರು ಅನ್ನೋರೆಲ್ಲ ಕಳ್ಳರೆ ಯಾಕಿರ್ತಾರೆ ಅನ್ನೋದಕ್ಕೂ ವ್ಯತ್ಯಾಸವಿದೆ. ಮೊದಲನೆಯದಕ್ಕೆ ದೇವೇ ಗೌಡ್ರು ಕೇಸ್ ಹಾಕಬೇಕು. ಎರಡನೆಯದಕ್ಕೆ ಅವನ ಮಗನೋ ಮೊಮ್ಮಗನೇ or any ಗೌಡ ಕೇಸು ಹಾಕಬಹುದು. ಸುಮ್ನೆ ಒಂದು ಉದಾಹರಣೆ ಕೊಟ್ಟೆ ಅಷ್ಟೇ ಸೀರಿಯಸ್ ಆಗಿ ತಗೋಬೇಡಿʼʼ ಎಂದು ಸಂಬರಗಿ ಫೇಸ್’ಬುಕ್’ನಲ್ಲಿ ಪೋಸ್ಟ್ ಹಾಕಿದ್ದು, ಒಕ್ಕಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಅವಮಾನಿಸಿದ ಪ್ರಶಾಂತ್ ಸಂಬರಗಿ: ವ್ಯಾಪಕ ಆಕ್ರೋಶ
Prasthutha|
- Advertisement -