ಸಂಸದೆ ಸುಮಲತಾಗೆ ಪ್ರತಾಪ್ ಸಿಂಹ ಅವಹೇಳನ | ವೀಡಿಯೊ ವೈರಲ್

Prasthutha: November 14, 2020

ಬೆಂಗಳೂರು : ಮಂಡ್ಯ ಸಂಸದೆ ಸುಮಲತಾ ಕುರಿತು ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಮಾತನಾಡಿರುವ ವೀಡಿಯೊವೊಂದು ಈಗ ವೈರಲ್ ಆಗಿದೆ. ‘ಆ ಯಮ್ಮಾ ಏನೂ ಮಾಡಲ್ಲ, ಮಂಡ್ಯದ ಕೆಲಸ ಏನೇ ಇದ್ದರೂ ನನಗೆ ಹೇಳಿ’ ಎಂದು ಪ್ರತಾಪ್ ಸಿಂಹ ಫೋನ್ ನಲ್ಲಿ ಮಾತನಾಡುತ್ತಿರುವ ವೀಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬೆಂಗಳೂರಿಗೆ ತೆರಳುವಾಗ ತಾಲೂಕಿನ ಯಲಿಯೂರ್ ಗೇಟ್ ಸರ್ಕಲ್ ಬಳಿ ಸುತ್ತಮುತ್ತಲಿನ ಗ್ರಾಮಸ್ಥರು ಸಾರ್ವಜನಿಕರ ಅನುಕೂಲಕ್ಕಾಗಿ ಕೆಳಸೇತುವೆ ನಿರ್ಮಿಸುವಂತೆ ಪ್ರತಾಪ್ ಸಿಂಹಗೆ ಮನವಿ ಮಾಡಿದ್ದಾರೆ.

ಆಗ ಹೆದ್ದಾರಿ ಯೋಜನಾ ನಿರ್ದೇಶಕರಿಗೆ ಮೊಬೈಲ್ ಕರೆ ಮಾಡಿ ಮಾತನಾಡಿದ ಪ್ರತಾಪ್ ಸಿಂಹ, ಮಂಡ್ಯ ಸಂಸದೆ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾಗಿದೆ.

“ದೇವೇಗೌಡರ ಕುಟುಂಬವನ್ನು ಸೋಲಿಸುವ ಉದ್ದೇಶದಿಂದ ಸುಮಲತಾ ಅವರನ್ನು ಗೆಲ್ಲಿಸಿದ್ದಾರೆ. ಅವರು ಯಾವ ಕೆಲಸ ಮಾಡುವುದಕ್ಕೂ ಬಿಡುವುದಿಲ್ಲ. ಮಂಡ್ಯದ ಯಾವುದೇ ಕೆಲಸ ಇದ್ದರೂ ನನಗೆ ಹೇಳಿ. ಆ ಯಮ್ಮ ಏನೂ ಕೆಲಸ ಮಾಡುವುದಿಲ್ಲ’’ ಎಂದು ಪ್ರತಾಪ್ ಸಿಂಹ ಫೋನ್ ನಲ್ಲಿ ಮಾತನಾಡಿದ್ದಾರೆ.

ಬೆಂಗಳೂರು-ಮೈಸೂರು ದಶಪಥ ಕಾಮಗಾರಿಯ ಯೋಜನಾಧಿಕಾರಿ ಪ್ರತಾಪ್ ಸಿಂಹ ಮಾತನಾಡಿದ್ದು, ಆಗ ಅವರು ಸುಮಲತಾ ಅವರ ಬಗ್ಗೆ ಮಾತನಾಡಿದ್ದು, ಆಗ ಅವರು ಸುಮಲತಾ ವಿರುದ್ಧವೇ ಮಾತನಾಡಿದ್ದಾರೆ ಎಂದು ಸಂಸದೆಯ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಮಗಾರಿಯಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರವನ್ನು ಸುಮಲತಾ ಪ್ರಶ್ನಿಸಿದ್ದರು. ಇದರ ಬಗ್ಗೆ ಯೋಜನಾಧಿಕಾರಿ ಪ್ರತಾಪ್ ಸಿಂಹ ಅವರಿಗೆ ದೂರು ನೀಡಿದಾಗ ಅವರು ನಮ್ಮ ಸಂಸದೆ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಪ್ರತಾಪ್ ಸಿಂಹ ಅವರು ತಮ್ಮ ಕ್ಷೇತ್ರದ ಸಮಸ್ಯೆ ನೋಡಿಕೊಳ್ಳಲಿ. ನಮ್ಮ ಕ್ಷೇತ್ರದ ಸಮಸ್ಯೆ ಬಗೆಹರಿಸಲು ಅವರು ಬಾರದಿರುವುದು ಒಳ್ಳೆಯದು ಎಂದು ಸುಮಲತಾ ಬೆಂಬಲಿಗರು ಕಿಡಿಗಾರಿದ್ದಾರೆ ಎಂದು ವರದಿಯೊಂದು ತಿಳಿಸಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ