ಮಡಿಕೇರಿ: ಕೊಡಗು ಪ್ರವಾಸದಲ್ಲಿರುವ ಸಂಸದ ಪ್ರತಾಪ್ ಸಿಂಹ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೆರೆವೆರಿಸಿದರು. ಮಡಿಕೇರಿ ತಾಲ್ಲೂಕಿನ ಕರಿಕೆ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆಯಡಿ ಮನೆಗಳಿಗೆ ನಲ್ಲಿಗಳ ಮೂಲಕ ಕುಡಿಯುವ ನೀರನ್ನು ಒದಗಿಸಲು 60 ಲಕ್ಷ ರೂ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.
ಇನ್ನೂ ಮಡಿಕೇರಿ ತಾಲ್ಲೂಕಿನ ದೊಡ್ಡಚೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಕೆ.ಜಿ ಬೋಪಯ್ಯ ರವರು, ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪರವರು, ಗ್ರಾಮದ ಮುಖಂಡರು, ಬಿಜೆಪಿ ಮುಖಂಡರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.